ನೆಲ್ಯಾಡಿ: ಹೊಸದಾಗಿ ನೋಂದಣಿಯಾಗಿರುವ ನೆಲ್ಯಾಡಿಯ ಲೋಟಸ್ ಕಾಂಪ್ಲೆಕ್ಸ್ನ 1ನೇ ಮಹಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಕಾಮಧೇನು ಮಹಿಳಾ ಸಹಕಾರ ಸಂಘ ನೆಲ್ಯಾಡಿ ಕಡಬ ತಾಲೂಕು ಇದರ ಉದ್ಘಾಟನಾ ಸಮಾರಂಭ ಸೆ.9ರಂದು ನಡೆಯಲಿದೆ.
ಬೆಳಿಗ್ಗೆ 9ರಿಂದ 10.30ರ ತನಕ ನೆಲ್ಯಾಡಿ ಲೋಟಸ್ ಕಾಂಪ್ಲೆಕ್ಸ್ನಲ್ಲಿರುವ ನೂತನ ಕಚೇರಿಯಲ್ಲಿ ಗಣಹೋಮ, ಲಕ್ಷ್ಮೀಪೂಜೆ ನಡೆಯಲಿದೆ. ಉಪ್ಪಿನಂಗಡಿ ಮೂರ್ತೆದಾರರ ಸೇವಾ ಸಹಕಾರ ಸಂಘದ ಮಾಜಿ ಅಧ್ಯಕ್ಷ ಶೇಖರ ಶಿಬಾರ್ಲ ಭಾಗವಹಿಸಲಿದ್ದಾರೆ. 10.30ರಿಂದ ಸಾಂಸ್ಕೃತಿಕ ಹಾಗೂ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. 11.45ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು ಬಿ.ಸಿ ರೋಡ್ ಮೂರ್ತೆದಾರ ಮಹಾಮಂಡಳಿಯ ಅಧ್ಯಕ್ಷ ಸಂಜೀವ ಪೂಜಾರಿಯವರು ಕಛೇರಿ ಉದ್ಘಾಟಿಸಲಿದ್ದಾರೆ. ಸಹಕಾರ ಸಂಘಗಳ ಸಹಾಯಕ ನಿಬಂಧಕಿ ತ್ರಿವೇಣಿ ರಾವ್ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯ ಸಂಚಾಲಕ ರೆ.ಫಾ. ಹನಿಜೇಕಬ್ರವರು ಭದ್ರತಾ ಕೊಠಡಿ ಉದ್ಘಾಟನೆ ಮಾಡಲಿದ್ದಾರೆ. ಎಸ್ಸಿಡಿಸಿಸಿ ಬ್ಯಾಂಕ್ನ ನಿರ್ದೇಶಕರು, ಕೆ.ಎಂ.ಎಫ್.ನ ಉಪಾಧ್ಯಕ್ಷರೂ ಆಗಿರುವ ಎಸ್.ಬಿ.ಜಯರಾಮ್ ರೈಯವರು ಗಣಕಯಂತ್ರ ಉದ್ಘಾಟಿಸಲಿದ್ದಾರೆ. ಪುತ್ತೂರು ಸಿಡಿಪಿಒ ಶ್ರೀಲತಾ ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ. ಪುತ್ತೂರು ಮಹಿಳಾ ವಿವಿದ್ದೋದ್ದೇಶ ಸಹಕಾರ ಸಂಘದ ಅಧ್ಯಕ್ಷೆ ಗೌರಿ ಬನ್ನೂರುರವರು ಷೇರು ಪತ್ರ ಬಿಡುಗಡೆ ಮಾಡಲಿದ್ದಾರೆ.
ಸಂಘದ ಮುಖ್ಯ ಪ್ರವರ್ತಕಿ ಉಷಾ ಅಂಚನ್ ಅಧ್ಯಕ್ಷತೆ ವಹಿಸಲಿದ್ದಾರೆ. ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷೆ ಚೇತನಾ, ಸಮಾಜ ಕಲ್ಯಾಣ ಮಂಡಳಿಯ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ, ನೆಲ್ಯಾಡಿ ಸರಕಾರಿ ಉ.ಹಿ.ಪ್ರಾ.ಶಾಲೆಯ ಮುಖ್ಯಗುರು ಆನಂದ ಅಜಿಲ, ನೆಲ್ಯಾಡಿ ವರ್ತಕ ಸಂಘದ ಅಧ್ಯಕ್ಷ ರಫೀಕ್ ಸೀಗಲ್ರವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಊರಿನ ದೇವಸ್ಥಾನಗಳ ಅಧ್ಯಕ್ಷರು, ಮೋಕ್ತೇಸರರು, ಮಸೀದಿಯ ಧರ್ಮಗುರುಗಳು, ಚರ್ಚಿನ ಧರ್ಮಗುರುಗಳು, ಬ್ಯಾಂಕ್ ಹಾಗೂ ಸಹಕಾರ ಸಂಘಗಳ ಮುಖ್ಯಸ್ಥರು ಮತ್ತು ನೌಕರರು, ವಿದ್ಯಾಸಂಸ್ಥೆಗಳ ಮುಖ್ಯಸ್ಥರು, ಊರಿನ ಸಂಘ ಸಂಸ್ಥೆಗಳ ಮುಖ್ಯಸ್ಥರನ್ನು ವಿಶೇಷವಾಗಿ ಆಹ್ವಾನಿಸಲಾಗಿದೆ ಎಂದು ಸಂಘದ ಮುಖ್ಯ ಪ್ರವರ್ತಕರಾದ ಉಷಾ ಅಂಚನ್ರವರು ತಿಳಿಸಿದ್ದಾರೆ.