ಬೆಳಂದೂರು ಸ.ಹಿ.ಪ್ರಾ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

0

ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಲು ಪ್ರತಿಭಾ ಕಾರಂಜಿ ಅವಶ್ಯಕ- ಲೋಹಿತಾಕ್ಷ ಕೆಡೆಂಜಿಕಟ್ಟ

ಕಾಣಿಯೂರು: ಮಕ್ಕಳ ಬಹುಮುಖ ಪ್ರತಿಭೆಗೆ ಪ್ರತಿಭಾ ಕಾರಂಜಿ, ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ. ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಲು ಪ್ರತಿಭಾ ಕಾರಂಜಿ ಅವಶ್ಯಕ. ಮಕ್ಕಳನ್ನು ಗುರುತಿಸುವ ಕಾರ್ಯ ಪ್ರತಿಭಾ ಕಾರಂಜಿಯಿಂದ ನಡೆಯುತ್ತಿದೆ ಎಂದು ಬೆಳಂದೂರು ಗ್ರಾ.ಪಂ. ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ ಹೇಳಿದರು.

ಅವರು ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ ಸವಣೂರು ಇವುಗಳ ಆಶ್ರಯದಲ್ಲಿ ಬೆಳಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.7ರಂದು ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಂದೂರು ಸ.ಹಿ.ಪ್ರಾ.ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಭವಾನಿಶಂಕರ ಅಗಳಿ ವಹಿಸಿದ್ದರು. ಕಡಬ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣರವರು ಶುಭಹಾರೈಸಿದರು. ಬೆಳಂದೂರು ಗ್ರಾ.ಪಂ ಸದಸ್ಯರಾದ ಜಯರಾಮ ಬೆಳಂದೂರು, ಹರಿಣಾಕ್ಷಿ ಬನಾರಿ, ಬೆಳಂದೂರು ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ ನಾರಾಯಣ್, ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳಂದೂರು ಒಕ್ಕೂಟದ ಅಧ್ಯಕ್ಷ ವೇಣುಗೋಪಾಲ ಕಳುವಾಜೆ ಉಪಸ್ಥಿತರಿದ್ದರು. ಸವಣೂರು ಕ್ಲಸ್ಟರ್ ಸಿಆರ್‌ಪಿ ಕುಶಾಲಪ್ಪ ಗೌಡ ಪ್ರಾಸ್ತಾವಿಕ ಮಾತನಾಡಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಬೆಳಂದೂರು ಶಾಲಾ ಮುಖ್ಯಶಿಕ್ಷಕಿ ಜಾನಕಿರವರು ಸ್ವಾಗತಿಸಿ, ಪಳ್ಳತ್ತಾರು ಶಾಲಾ ಮುಖ್ಯಗುರು ಸೀತಾರಾಮರವರು ವಂದಿಸಿದರು. ಶಿಕ್ಷಕಿ ಗಾಯತ್ರಿ ಕಾರ್ಯಕ್ರಮ ನಿರೂಪಿಸಿದರು.

ಮೌನ ಪ್ರಾರ್ಥನೆ: ಸಚಿವ ಉಮೇಶ್ ಕತ್ತಿ ನಿಧನರಾದ ಹಿನ್ನಲೆಯಲ್ಲಿ ಕಾರ್ಯಕ್ರಮದಲ್ಲಿ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಿ, ಶ್ರದ್ಧಾಂಜಲಿ ಅರ್ಪಿಸಲಾಯಿತು.

LEAVE A REPLY

Please enter your comment!
Please enter your name here