ನೆಲ್ಯಾಡಿ: ವಿಶ್ವಹಿಂದೂ ಪರಿಷತ್, ಬಜರಂಗದಳ ಗೋಳಿತ್ತೊಟ್ಟು ಘಟಕ ಉಪ್ಪಿನಂಗಡಿ ಪ್ರಖಂಡದ ಆಶ್ರಯದಲ್ಲಿ ಎ.ಜೆ.ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ಗೋಳಿತ್ತೊಟ್ಟು ಘಟಕದ ಸಕ್ರಿಯ ಕಾರ್ಯಕರ್ತ ಮಹೇಶ್ ಡೆಬ್ಬೇಲಿ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ ಸೆ.11ರಂದು ಬೆಳಿಗ್ಗೆ ಗೋಳಿತ್ತೊಟ್ಟು ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದಲ್ಲಿ ಜರಗಲಿದೆ.
ಬಜರಂಗದಳ ಪ್ರಾಂತ ಸಹ ಸಂಚಾಲಕ ರಘು ಸಕಲೇಶಪುರ ಶಿಬಿರ ಉದ್ಘಾಟಿಸಲಿದ್ದಾರೆ. ವಿಶ್ವಹಿಂದೂ ಪರಿಷತ್ ಪುತ್ತೂರು ಜಿಲ್ಲೆ ಉಪಾಧ್ಯಕ್ಷ ಭಾಸ್ಕರ ಧರ್ಮಸ್ಥಳ, ಮಂಗಳೂರು ಎ.ಜೆ ಆಸ್ಪತ್ರೆ ರಕ್ತನಿಧಿ ವ್ಯವಸ್ಥಾಪಕ ಗೋಪಾಲಕೃಷ್ಣ, ವಿಶ್ವಹಿಂದೂ ಪರಿಷತ್ ಜಿಲ್ಲಾ ಸಹ ಕಾರ್ಯದರ್ಶಿ ನವೀನ್ ನೆರಿಯ, ವಿಶ್ವಹಿಂದೂ ಪರಿಷತ್ ಉಪ್ಪಿನಂಗಡಿ ಪ್ರಖಂಡದ ಅಧ್ಯಕ್ಷ ಸುದರ್ಶನ್, ಪ್ರಗತಿಪರ ಕೃಷಿಕ ವೆಂಕಟ್ರಮಣ ಕೆ.ಪಿ.ಸುಲ್ತಾಜೆ, ಗೋಳಿತ್ತೊಟ್ಟು ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಅಲೆಕ್ಕಿಯವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಕ್ತದಾನ ಮಾಡುವವರು ಮಾಹಿತಿಗಾಗಿ ನಾಗೇಶ್ ಪೆರಣ (ಮೊ:9972394065), ತಾರನಾಥ ಬಳಕ್ಕ (9964765756)ರವರನ್ನು ಸಂಪರ್ಕಿಸಬಹುದು ಎಂದು ಸಂಘಟಕರು ತಿಳಿಸಿದ್ದಾರೆ.