ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

0

ಪುತ್ತೂರು : ವಿದ್ಯಾರ್ಥಿ ಶಕ್ತಿ ಅನಾವರಣಗೊಳ್ಳಬೇಕಾದರೆ ಸಾಂಘಿಕ ಪ್ರಯತ್ನ ನಡೆಯಬೇಕು. ಕಲಿಕೆಯ ಜೊತೆಗೆ ಸಮಾಜದಲ್ಲಿ ಬೇರೆ ಬೇರೆಕ್ಷೇತ್ರದಲ್ಲಿ ಆಸಕ್ತಿಯನ್ನು ಬೆಳೆಸಿದರೆ ಮಾತ್ರ ಯುವ ಸಮಾಜದ ಸದ್ಬಳಕೆಯಾಗುವುದು. ಎಂದು ಜಿ.ಎಲ್. ಗ್ರೂಪ್ ಆಫ್ ಕಂಪೆನೀಸ್ ಇದರ ಆಡಳಿತ ಪಾಲುದಾರ ಸುಧನ್ವ ಆಚಾರ್ಯ ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ 2022-23ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗ ಸಂಚಾಲಕ ಹರ್ಷಿತ್ ಕೊಯಿಲ ಮಾತನಾಡಿ ನಾಯಕತ್ವದ ಬೆಳವಣಿಗೆಗೆ ಹಾಗೂ ಆರೋಗ್ಯಯುತ ಪ್ರಜಾಪ್ರಭುತ್ವದ ನಿರ್ಮಾಣಕ್ಕೆ ವಿದ್ಯಾರ್ಥಿಸಂಘಗಳು ಮಾರ್ಗಸೂಚಿಗಳಾಗಲಿವೆ. ಭವಿಷ್ಯಕ್ಕೆ ಭದ್ರ ಬುನಾದಿ ಕಲ್ಪಿಸಬಲ್ಲ ಶಕ್ತಿ ಇರುವ ವಿದ್ಯಾರ್ಥಿ ಜೀವನದಲ್ಲಿ, ನಾಯಕತ್ವ ಗುಣಗಳನ್ನು ಬೆಳೆಸಿಕೊಂಡಲ್ಲಿ ಉತ್ತಮ ಪ್ರಜೆಗಳಾಗಿ ಬದುಕಲು ಸಾಧ್ಯ. ಜಗತ್ತಿನ ಕತ್ತಲೆಯನ್ನು ಹೋಗಲಾಡಿಸುವ ಅಗಾಧ ಶಕ್ತಿ ವಿದ್ಯಾರ್ಥಿಗಳಲ್ಲಿದೆ. ಉತ್ತಮ ನಾಯಕತ್ವ ಗುಣಮಟ್ಟವನ್ನು ಬೆಳೆಸಿಕೊಂಡಾಗ ಪ್ರಪಂಚವನ್ನೇ ಬದಲಿಸುವಂತಹ ಪ್ರಜೆಗಳಾಗಬಹುದು. ಎಂದು ಹೇಳಿದರು. ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸಿದ ನರೇಂದ್ರ ಪ.ಪೂ.ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಕಾಂತ ಕೊಳತ್ತಾಯ ಮಾತನಾಡಿ ಜೀವನದಲ್ಲಿ ವಿದ್ಯಾರ್ಥಿಗಳು ಕಲಿಕೆಯ ಗುಣಮಟ್ಟವನ್ನು ವೃದ್ಧಿಸಿ ಏಕತೆಯಿಂದ ಒಗ್ಗೂಡಿಕೊಂಡು ನಿರಂತರ ಪರಿಶ್ರಮದಿಂದ ಸಾಧಿಸಬೇಕಾದ ಅನಿವಾರ‍್ಯತೆಯಿದೆ. ಸಮಾಜಕ್ಕೆ ಸಹಕಾರಿಯಾಗುವಂತಹ ಶಿಕ್ಷಣವು ವಿದ್ಯಾರ್ಥಿಗಳಿಗೆ ಸಿಗಬೇಕಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಸಂಘವು ಹೆಜ್ಜೆ ಹಾಕಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.

ವೇದಿಕೆಯಲ್ಲಿ ವಿದ್ಯಾರ್ಥಿ ಸಂಘದ ನಾಯಕ ದ್ವಿತೀಯ ವಿಜ್ಞಾನ ವಿಭಾಗದ ಮಹೇಶ್ ಪ್ರಸಾದ್, ಕಾರ‍್ಯದರ್ಶಿ ದೀಕ್ಷ, ಜೊತೆಕಾರ‍್ಯದರ್ಶಿ ಚೈತ್ರಾ ಸಿ.ಕೆ. ಉಪಸ್ಥಿತರಿದ್ದರು.
ದ್ವಿತೀಯ ವಿಜ್ಞಾನ ವಿಭಾಗದ ಅನ್ವಿತಾ ಮತ್ತು ವಾಣಿಜ್ಯ ವಿಭಾಗದ ಸುಭಾಷಿತಾ ವರದಿ ಓದಿದರು. ಪ್ರಥಮ ವಾಣಿಜ್ಯ ವಿಭಾಗದ ಭೂಮಿಕಾ ಸ್ವಾಗತಿಸಿ, ದ್ವಿತೀಯ ವಿಜ್ಞಾನ ವಿಭಾಗದ ಮಹೇಶ್ ಪ್ರಸಾದ್ ವಂದಿಸಿದರು. ದ್ವಿತೀಯ ವಿಜ್ಞಾನ ವಿಭಾಗದ ಅಂಕಿತಾ ಕಾರ‍್ಯಕ್ರಮನಿರೂಪಿಸಿದರು.

LEAVE A REPLY

Please enter your comment!
Please enter your name here