ಸೆ.10: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದಿಂದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ 168ನೇ ಜನ್ಮದಿನಾಚರಣೆ

0

ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರ ಇದರ ವತಿಯಿಂದ, `ಒಂದೇ ಜಾತಿ, ಒಂದೇ ಮತ, ಒಂದೇ ದೇವರು’ ಎಂಬ ಅತ್ಯಪೂರ್ವ ಸಂದೇಶವನ್ನು ಮನುಕುಲಕ್ಕೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ 168ನೇ ಜನ್ಮದಿನಾಚರಣೆ ಕಾರ್ಯಕ್ರಮವು ಸೆ.೧೦ರಂದು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆಯಲಿದೆ ಎಂದು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಹೇಳಿದ್ದಾರೆ.

ಸೆ.7ರಂದು ಸುದ್ದಿ ಸ್ಟುಡಿಯೋದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಸೆ.೧೦ರಂದು ಪೂರ್ವಾಹ್ನ ೭.೩೦ರಿಂದ ಶ್ರೀಸಾಯಿ ಶಾಂತಿ ಸರಪಾಡಿ ನೇತೃತ್ವದಲ್ಲಿ ಪ್ರಾರ್ಥನೆ, ಪಂಚಾಮೃತಾಭಿಷೇಕ ನಡೆಯಲಿದೆ. ೮.೩೦ರಿಂದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಗ್ರಾಮ ಸಮಿತಿ ಆಲಂಕಾರು, ಶಾಂತಿಗೋಡು ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ ೯.೩೦ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಗುರು ಸಂದೇಶ, ಸಾಧಕರಿಗೆ ಸನ್ಮಾನ, ಶೈಕ್ಷಣಿಕ ಪ್ರತಿಭಾ ಪುರಸ್ಕಾರ ಮತ್ತು ಸುಮಾರು ೫ ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಮಧ್ಯಾಹ್ನ 12ರಿಂದ ಅಭಿನಂದನೆ ಕಾರ್ಯಕ್ರಮ ನಡೆಯಲಿದ್ದು, ಪುತ್ತೂರು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಒಕ್ಕಲಿಗ ಗೌಡ ಸಮಾಜ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ, ವಿಶ್ವ ಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ ಜಗದೀಶ ಎಸ್.ಎನ್., ಕುಲಾಲ ಸಮಾಜ ಸೇವಾ ಸಂಘದ ಅಧ್ಯಕ್ಷ ನವೀನ್ ಕುಲಾಲ್, ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ರಾಮಚಂದ್ರ ನಾಯ್ಕರಿಗೆ ಅಭಿನಂದನೆಯ ಬಳಿಕ ಅಪರಾಹ್ನ 1 ಗಂಟೆಗೆ ಮಹಾಪೂಜೆ ನಡೆದು ಪ್ರಸಾದ ವಿತರಣೆಯಾಗಲಿದೆ. ೧.೩೦ಕ್ಕೆ ಪ್ರಸಾದ ಭೋಜನ ನಡೆದು, ಅಪರಾಹ್ನ 2ರಿಂದ ಯುವವಾಹಿನಿ ಪುತ್ತೂರು ಘಟಕದ ಪ್ರಾಯೋಜಕತ್ವದಲ್ಲಿ ವಿಠಲ ನಾಯಕ್ ಕಲ್ಲಡ್ಕ ಇವರಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಪೂರ್ವಾಹ್ನ 9.30ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಕಳ ಭುವನೇಂದ್ರ ಕಾಲೇಜು ಪ್ರಾಂಶುಪಾಲ ಮಂಜುನಾಥ ಕೋಟ್ಯಾನ್ ಗುರುಸಂದೇಶ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಕೋಶಾಧಿಕಾರಿ, ಶ್ರೀ ಗುರು ಬೆಳದಿಂಗಳು ಕುದ್ರೋಳಿ ಇದರ ಅಧ್ಯಕ್ಷ ಪದ್ಮರಾಜ್ ಆರ್., ಬಿರುವೆರ್ ಕುಡ್ಲದ ಸ್ಥಾಪಕ ಅಧ್ಯಕ್ಷರಾದ ಉದಯಕುಮಾರ್ ಬಲ್ಲಾಳ್‌ಬಾಗ್, ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಡಾ| ರಾಜಾರಾಮ್ ಕೆ.ಬಿ. ಭಾಗವಹಿಸಲಿದ್ದಾರೆ ಎಂದು ಸತೀಶ್ ಕುಮಾರ್ ಕೆಡೆಂಜಿ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಉಪಾಧ್ಯಕ್ಷೆ ಚಂದ್ರಕಲಾ ಮುಕ್ವೆ, ಕಾರ್ಯದರ್ಶಿ ನಾಗೇಶ್ ಬಲ್ನಾಡು, ಮಂದಿರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೊನ್ನಪ್ಪ ಪೂಜಾರಿ ಕೈಂದಾಡಿ, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here