ವಿಟ್ಲ: ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆ ಪ್ರಾಂತ್ಯ 7ರ ಪ್ರಾಂತೀಯ ಸಮ್ಮೇಳನದ ಪೂರ್ವಭಾವಿಯಾಗಿ ವಿಟ್ಲ ಪೊಲೀಸ್ ಠಾಣೆಗೆ ಕಂಪ್ಯೂಟರ್ ಪ್ರಿಂಟರ್ ಅನ್ನು ಕೊಡುಗೆಯಾಗಿ ನೀಡಲಾಯಿತು.
ವಿಟ್ಲದ ಉದ್ಯಮಿ ಹಾಗೂ ವಿಟ್ಲ ಸಿಟಿ ಲಯನ್ಸ್ ಕ್ಲಬ್ಬಿನ ಗೈಡಿಂಗ್ ಲೈನ್ ಆದ ಸತೀಶ್ ಕುಮಾರ್ ಆಳ್ವ ಇರಾಬಾಳಿಕೆರವರು ಕೊಡುಗೆಯಾಗಿ ನೀಡಿದ ಈ ಪ್ರಿಂಟರ್ ಅನ್ನು ವಿಟ್ಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಹೆಚ್.ಈ. ನಾಗರಾಜ್ ರವರ ಮೂಲಕ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಂತ್ಯ 7ರ ಅಧ್ಯಕ್ಷರಾದ ವಿ. ಯನ್. ಸುದರ್ಶನ್ ಪಡಿಯಾರ್, ವಿಟ್ಲ ಸಿಟಿ ಲಯನ್ಸ್ ಕ್ಲಬ್ಬಿನ ಕಾರ್ಯದರ್ಶಿ ಹರೀಶ್ ಶೆಟ್ಟಿ, ಸದಸ್ಯ ಸದಾನಂದ ಗೌಡ ಸೇರಾಜೆ, ವಿಟ್ಲ ಠಾಣಾ ಎಸ್.ಐ. ಸಂದೀಪ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.