ನೃತ್ಯೋಪಾಸನಾ ಕಲಾಕೇಂದ್ರದ ವಿಟ್ಲ ಶಾಖೆ ವಿದ್ಯಾರ್ಥಿಗಳಿಂದ `ನೃತ್ಯೋಹಂ’ ಕಾರ್ಯಕ್ರಮ

0

 

ವಿಟ್ಲ:ಪುತ್ತೂರಿನ ನೃತ್ಯೋಪಾಸನಾ ಕಲಾಕೇಂದ್ರದ ವಿಟ್ಲ ಶಾಖೆ ಆಶ್ರಯದಲ್ಲಿ `ನೃತ್ಯೋಹಂ’ ಭರತನಾಟ್ಯ ಕಾರ್ಯಕ್ರಮ ವಿಟ್ಲ ಶ್ರೀ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.
ವಿಠ್ಠಲ ಬಾಲಿಕಾ ಪ್ರೌಢ ಶಾಲಾ ನಿವೃತ್ತ ಮುಖ್ಯ ಶಿಕ್ಷಕ ಕೆ.ಕೃಷ್ಣ ಭಟ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.ಶ್ರೀ ಭಗವತಿ ದೇವಸ್ಥಾನದ ಆಡಳಿತ ವ್ಯವಸ್ಥಾಪಕ ಕೇಶವ ಆರ್.ವಿ. ಅತಿಥಿಯಾಗಿದ್ದರು.ಕಲಾ ಕೇಂದ್ರದ ನಿರ್ದೇಶಕ ಮಂಜುನಾಥ್ ಪಿ.ಎಸ್.ಉಪಸ್ಥಿತರಿದ್ದರು.ಉಪನ್ಯಾಸಕಿ ಮೈತ್ರಿ ಭಟ್ ಕಾರ್ಯಕ್ರಮ ನಿರೂಪಿಸಿದರು.ಬಳಿಕ ನೃತ್ಯಗುರು, ವಿದುಷಿ ಶಾಲಿನಿ ಆತ್ಮಭೂಷಣ್ ನೃತ್ಯ ನಿರ್ದೇಶನ ಹಾಗೂ ನಟುವಾಂಗದಲ್ಲಿ ವಿಟ್ಲ ಕೇಂದ್ರದ ವಿದ್ಯಾರ್ಥಿಗಳಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.ಹಾಡುಗಾರಿಕೆಯಲ್ಲಿ ವಸಂತ ಕುಮಾರ್ ಗೋಸಾಡ, ಮೃದಂಗದಲ್ಲಿ ಗೀತೇಶ್ ನೀಲೇಶ್ವರ, ಕೊಳಲಿನಲ್ಲಿ ರಾಜಗೋಪಾಲ್ ಕಾಞಂಗಾಡ್ ಸಹಕರಿಸಿದರು.

LEAVE A REPLY

Please enter your comment!
Please enter your name here