ಕೆದಿಲ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ

0

ಮುಂದಿನ ದಿನಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ತೆರಯಲು ಪ್ರಯತ್ನ: ಸಂಜೀವ ಮಠಂದೂರು

ವಿಟ್ಲ: ಇದೊಂದು ಅರ್ಥಪೂರ್ಣ ಕಾರ್ಯಕ್ರಮ. ಸರಕಾರದ ಉದ್ದೇಶಗಳನ್ನು ಈಡೇರಿಸಲಾಗುತ್ತಿದೆ. ಸಾರ್ವಜನಿಕರು ಗ್ರಾ.ಪಂ.ನೊಂದಿಗೆ ನಿರಂತರ ಸಂಪರ್ಕವನ್ನು ಇಟ್ಟುಕೊಂಡು ಅಭಿವೃದ್ಧಿಗೆ ಕೈಜೋಡಿಸಿ. ಆಡಳಿತ ಮಂಡಳಿ ಹಾಗೂ ಸಿಬ್ಬಂದಿವರ್ಗದ ಪ್ರಯತ್ನದಿಂದ ಕೆದಿಲ ಗ್ರಾಮ ಪಂಚಾಯತ್ ಒಂದು ಮಾದರಿ ಪಂಚಾಯತ್ ಆಗಿದೆ. ಸಮಾಜದಲ್ಲಿರುವ ಪ್ರತಿಯೊಬ್ಬ ವ್ಯಕ್ತಿಯನ್ನು ಮೇಲೆಕ್ಕೆತ್ತುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಇದೀಗಾಗಲೇ ಹಲವಾರು ಅನುದಾನಗಳನ್ನು ಗ್ರಾಮ ಪಂಚಾಯತ್ ಗೆ ನೀಡಲಾಗಿದ್ದು, ಉಳಿದಿರುವ ನಿಮ್ಮ ಇನ್ಮಷ್ಟು ಬೇಡಿಕೆಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಮುಂದಿನ ದಿನಗಳಲ್ಲಿ ಪರಿಹರಿಸಲಾಗುವುದು. ಮುಂದಿನ ದಿನಗಳಲ್ಲಿ ಸುತ್ತಮುತ್ತಲಿನ ಗ್ರಾಮಗಳಿಗೆ ಅನುಕೂಲವಾಗುವಂತೆ ಕೆದಿಲದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ತೆರೆಯಲು ಪ್ರಯತ್ನಿಸಲಾಗುವುದು ಎಂದು ಪುತ್ತೂರು ಶಾಸಕರಾದ ಸಂಜೀವ ಮಠಂದೂರುರವರು ಹೇಳಿದರು.

ಅವರು ಸೆ.10ರಂದು ಕೆದಿಲ ಗ್ರಾಮ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬಂಟ್ವಾಳ ಮತ್ತು ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ಜಂಟಿ ಆಶ್ರಯದಲ್ಲಿ ಕೆದಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಜಲಜೀವನ್ ಮಿಷನ್ ಯೋಜನೆಯ ಶಂಕು ಸ್ಥಾಪನೆ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ನಾವು ನೆಮ್ಮದಿಯ ಬದುಕು ಸಾಗಿಸುವಲ್ಲಿ ಆರೋಗ್ಯ ಕೇಂದ್ರಗಳ ಪಾತ್ರ ಬಹಳಷ್ಟಿದೆ. ಆದ್ದರಿಂದ ಅಲ್ಲಲ್ಲಿ ಆರೋಗ್ಯ ಕ್ಷೇಮ ಕೇಂದ್ರವನ್ನು ತೆರೆಯಲಾಗುತ್ತಿದೆ. ಜನರ ಮೂಲಭೂತ ಅವಶ್ಯಕತೆಗಳಿಗೆ ಕೇಂದ್ರ ಸರಕಾರ ಸದಾ ಸ್ಪಂದಿಸುತ್ತಿದೆ. ವಿವಿಧ ಯೋಜನೆಗಳ ಮೂಲಕ ಬೇರೆ ಬೇರೆ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ರಸ್ತೆಗಳು, ಶಾಲಾ ಕಟ್ಟಡ, ಅಂಗನವಾಡಿಗಳ ಅಭಿವೃದ್ಧಿ ನಿರಂತರವಾಗಿ ನಡೆಸಲಾಗುತ್ತಿದೆ. ಮೂಲಭೂತ ಸೌಲಭ್ಯಕ್ಕೆ ಒತ್ತು ಕೊಟ್ಟು ಕೆಲಸ ಮಾಡಲಾಗುತ್ತಿದೆ. ರೈತರ ಮಕ್ಕಳಿಗೆ ರೈತವಿದ್ಯಾನಿಧಿ ಯೋಜನೆ ಇದೆ. ಶೈಕ್ಷಣಿಕೆ ಸುಧಾರಣೆಗಳನ್ನು ತರಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಕೆದಿಲ ಗ್ರಾಮ ಪಂಚಾಯತ್ ನಿಂದ ಉಳ್ಳಾಲ ತಾಲೂಕಿಗೆ ವರ್ಗಾವಣೆಗೊಂಡ ಕಾರ್ಯದರ್ಶಿ ದಿನೇಶ್ ಕುಮಾರ್‌ರವರನ್ನು ಶಾಸಕರು‌ ಸನ್ಮಾನಿಸಿದರು.

ಗ್ರಾ.ಪಂ.ಅದ್ಯಕ್ಷ ರಾದ ಜಯಂತಿ ದನಂಜಯ ಶೆಟ್ಟಿ, ಉಪಾಧ್ಯಕ್ಷರಾದ ಉಮೇಶ್ ಮುರುವ, ಮಾಣಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶಶಿಕಲ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಎಂ. ಭುವನೇಂದ್ರ ಕುಮಾರ್, ಗ್ರಾ.ಪಂ.ಸದಸ್ಯರಾದ ಶ್ಯಾಮ್ ಪ್ರಸಾದ್, ಹರೀಶ್ ವಾಲ್ತಾಜೆ, ಬೇಬಿ ಮುರುವ, ಅಬ್ದುಲ್ ಅಝೀಜ್ ಸತ್ತಿಕಲ್ಲು, ಸುಲೈಮಾನ್ ಸರೊಳಿ. ಬೀಪಾತಿಮ್ಮ ಅತಿಥಿಗಳಿಗೆ ಹೂ ನೀಡಿ ಗೌರವಿಸಿದರು.

ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಎಂ. ಭುವನೇಂದ್ರ ಕುಮಾರ್ ಸ್ವಾಗತಿಸಿದರು. ಗ್ರಾ.ಪಂ.ಉಪಾಧ್ಯಕ್ಷರಾದ ಉಮೇಶ್ ಮುರುವ ವಂದಿಸಿದರು. ಗೋಪಾಲಕೃಷ್ಣ ಭಟ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here