ಉಪ್ಪಿನಂಗಡಿ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರೇಬಂಡಾಡಿ ಗ್ರಾಮದ ಕಜೆಕ್ಕೋಡಿ ಎಂಬಲ್ಲಿ ಶುಕ್ರವಾರ ನಡೆದಿದೆ.
ಇಲ್ಲಿನ ಅಚ್ಯುತ ಪೂಜಾರಿ (47) ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ಅಪರಾಹ್ನ ಸಮಯದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಇವರು ಮನೆಯ -ನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಲಿ ಕೆಲಸ ಮಾಡುತ್ತಿದ್ದ ಇವರು ಮನೆ ಕಟ್ಟಲೆಂದು ಸಾಲ ಮಾಡಿದ್ದು, ಸಾಲ ತೀರಿಸಲಾಗದೆ. ಬೇಸತ್ತ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಮೃತರು ಪತ್ನಿ, ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಘಟನೆಯ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.