ಬಿಲ್ಲವ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 168ನೇ ಜನ್ಮ ದಿನಾಚರಣೆ

0

ಪುತ್ತೂರು: `ಒಂದೇ ಜಾತಿ, ಒಂದೇ ಮತ, ಒಂದೇ ದೇವರು’ ಎಂಬ ಅತ್ಯಪೂರ್ವ ಸಂದೇಶವನ್ನು ಮನುಕುಲಕ್ಕೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ, ಬ್ರಹ್ಮಶ್ರೀನಾರಾಯಣ ಗುರುಸ್ವಾಮಿ ಮಂದಿರ ಪುತ್ತೂರು ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ 168ನೇ ಜನ್ಮ ದಿನಾಚರಣೆಯು ಸೆ.10ರಂದು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾ ಭವನದಲ್ಲಿ ನಡೆಯಿತು.


ಬೆಳಿಗ್ಗೆ 7.30ರಿಂದ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಸಾಯಿ ಶಾಂತಿ ಸರಪಾಡಿಯವರ ನೇತೃತ್ವದಲ್ಲಿ ಪ್ರಾರ್ಥನೆ, ಪಂಚಾಮೃತಾಭಿಷೇಕ ನಂತರ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಆಲಂಕಾರು ಹಾಗೂ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯವರಿಂದ ಭಜನೆ ನೆರವೇರಿತು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಗುರು ಸಂದೇಶ, ಸಾಧಕರಿಗೆ ಸನ್ಮಾನ, ಶೈಕ್ಷಣಿಕ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಕಳ ಭವನೇಂದ್ರ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಕೋಟ್ಯಾನ್ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಯವರ ಗುರು ಸಂದೇಶ ನೀಡಿದರು. ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಕೋಶಾಧಿಕಾರಿಗಳು, ಶ್ರೀಗುರು ಬೆಳಂದಿಗಳು ಇದರ ಅಧ್ಯಕ್ಷರಾಗಿರುವ ಪದ್ಮರಾಜ್ ಆರ್., ಯುವವಾಹಿನ ಕೇಂದ್ರ ಸಮಿತಿ ಮಂಗಳೂರು ಇದರ ಮಾಜಿ ಅಧ್ಯಕ್ಷ ಡಾ|ಬಿ,ಕೆ ರಾಜಾರಾಮ್ ಕೆ.ಬಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here