ಸೆ.12;ಸೂರಂಬೈಲು ಶಾಲೆಯಲ್ಲಿ ಬೆಟ್ಟಂಪಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಚಿಣ್ಣರ ಕಲರವ- 2022-23

0

ನಿಡ್ಪಳ್ಳಿ; ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ  ಬೆಟ್ಟಂಪಾಡಿ ಹಾಗೂ ಸ.ಹಿ.ಪ್ರಾ.ಶಾಲೆ ಸೂರಂಬೈಲು ಇವರ ಜಂಟಿ ಆಶ್ರಯದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ ಚಿಣ್ಣರ ಕಲರವ- 2022-23’ ಸೆ.12 ರಂದು ಸ.ಹಿ.ಪ್ರಾ.ಶಾಲೆ ಸೂರಂಬೈಲು ಇಲ್ಲಿ ನಡೆಯಲಿದೆ.

ಬೆಳಿಗ್ಗೆ ಗಂಟೆ 9.30 ಕ್ಕೆ ಕಾರ್ಯಕ್ರಮವನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದು ಹಲವು ಗಣ್ಯರು ಉಪಸ್ಥಿತರಿರುವರು.ಸಂಜೆ 3.30 ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು ಬೆಟ್ಟಂಪಾಡಿ ಕ್ಲಸ್ಟರ್ ಮಟ್ಟದ ಸುಮಾರು 11 ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಲಿರುವರು ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಪರಮೇಶ್ವರಿ ಮತ್ತು ಪ್ರತಿಭಾ ಕಾರಂಜಿ ಸಮಿತಿ ಅಧ್ಯಕ್ಷ ನಾರಾಯಣ ಪೂಜಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here