





ಪುತ್ತೂರು:ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು, ಸರಕಾರಿ ಪದವಿ ಪೂರ್ವ ಕಾಲೇಜು ಬೆಳಿಯೂರುಕಟ್ಟೆ ಇದರ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟವು ಸೆ.10ರಂದು ಬೆಳಿಯೂರುಕಟ್ಟೆ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಜರುಗಿತು.








ಪಂದ್ಯಾಟವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಯಣ್ಣ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಗ್ರಾಮೀಣ ಭಾಗವದಲ್ಲಿ ಉತ್ತಮ ಸಂಘಟನೆಯೊಂದಿಗೆ ಕ್ರೀಡಾಕೂಟ ಆಯೋಜಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಬಲ್ನಾಡು ಗ್ರಾ.ಪಂ ಅಧ್ಯಕ್ಷೆ ಇಂದಿರಾ ಎಸ್.ರೈ, ಉಪಾಧ್ಯಕ್ಷೆ ಪರಮೇಶ್ವರಿ ಭಟ್, ಪದವಿಪೂರ್ವ ಶಿಕ್ಷಣ ಇಲಾಖೆಶೈಕ್ಷಣಿಕ ಶಾಳಾ ಸಹಾಯಕ ನಿರ್ದೇಶಕ ಆನಂದ ಪಿ., ಮಂಗಳೂರು ಕಿಟೆಲ್ ಮೆಮೋರಿಯಲ್ ಪ.ಪೂ ಕಾಲೇಜಿನ ಪ್ರಾಂಶುಪಾಲ ವಿಠಲ ಎ., ಕ್ರೀಡಾ ಸಂಯೋಜಕ ಪುನೀತ್ ಕೆ., ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೋರ್ಮಂಡ, ದಾನಿಗಳಾದ ಯೂಸುಫ್ ಗೌಸಿಯಾ, ಗಣೇಶ್ ಭಟ್, ಎ.ಎಂ ಪ್ರವೀಣ್ ಚಂದ್ರ ಆಳ್ವ, ರಾಮಚಂದ್ರ ರೈ, ಫೆಲಿಕ್ಸ್ ಮೋಂತೆರೋ, ಜಯರಾಮ ಶೆಟ್ಟಿ, ಜಗನ್ಮೋಹನ ರೈ ಶೈಲೇಶ್, ಶರೀಫ್ ರಾಯಲ್, ಎಂ.ಎಸ್ ಹಮೀದ್, ರಾಧಾಕೃಷ್ಣ ರೈ ಅಗರ್ತಬೈಲು, ಅಂಬ್ರೋಸ್ ಡಿ’ಸೋಜ, ಚಂದ್ರಾವತಿ, ದೇವದಾಸ ರೈ, ಪ್ರಶಾಂತ್ ಶೆಣಯ ಹಾಗೂ ಜಯಗುರು ಆಚಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
 
 
ಸನ್ಮಾನ:
ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೋರ್ಮಂಡರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಪ್ರಾಂಶುಪಾಲ ಹರಿಪ್ರಕಾಶ್ ಬೈಲಾಡಿ ಸ್ವಾಗತಿಸಿದರು. ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿ, ಮುಖ್ಯ ಶಿಕ್ಷಕಿ ಸುನೀತಾ ಎಂ ವಂದಿಸಿದರು. ಶಿಕ್ಷಕರು ಸಹಕರಿಸಿದರು.

ತಾಲೂಕಿನ ಪದವಿ ಪೂರ್ವ ಕಾಲೇಜುಗಳ 10 ಬಾಲಕರ ತಂಡ ಹಾಗೂ ೫ ಬಾಲಕಿಯರ ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದವು. ಇದರಲ್ಲಿ ಬಾಲಕರ ವಿಭಾಗದಲ್ಲಿ ಸಂತ ಫಿಲೋಮಿನಾ ಕಾಲೇಜು(ಪ್ರ), ಕೊಂಬೆಟ್ಟು ಪದವಿ ಪೂರ್ವ ಕಾಲೇಜು(ದ್ವಿ) ಬಾಲಕಿಯರ ವಿಭಾಗದಲ್ಲಿ ವಿವೇಕಾನಂದ ಕಾಲೇಜು(ಪ್ರ) ಹಾಗೂ ಸಂತ ಫಿಲೋಮಿನಾ ಕಾಲೇಜು(ದ್ವಿ)ಸ್ಥಾನವನ್ನು ಪಡೆದುಕೊಂಡಿದೆ. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಬಹುಮಾನ ವಿತರಿಸಿದರು. ಬಲ್ನಾಡು ಗ್ರಾ.ಪಂ ಅಧ್ಯಕ್ಷೆ ಇಂದಿರಾ ಎಸ್.ರೈ, ಉಪಾಧ್ಯಕ್ಷೆ ಪರಮೇಶ್ವರಿ ಭಟ್, ಪ್ರಾಂಶುಪಾಲ ಹರಿಪ್ರಕಾಶ್ ಬೈಲಾಡಿ ಹಾಗೂ ದಾನಿಗಳು ಉಪಸ್ಥಿತರಿದ್ದರು.



            





