ಪುತ್ತೂರು: ಬೆಳ್ಳಾರೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಅಬ್ದುಲ್ ಸಪ್ರಿತ್ ಯಾನೆ ಅಬ್ದುಲ್ ಸಫ್ರಿಜ್ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.
ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಬೆಳ್ಳಾರೆಯ ಅಮ್ಮು ರೆ, ಕಾಂಪ್ಲೆಕ್ಸ್ ನ ಮ್ಯಾನೇಜರ್ ಪ್ರಶಾಂತ್ ಪೂಂಜರವರಿಗೆ, ಪ್ರವೀಣ್ ನೆಟ್ಟಾ ಕೊಲೆ ಆರೋಪಿ ಶಫೀಕ್ ತಮ್ಮ ಅಬ್ದುಲ್ ಸಫ್ರಿಜ್ ಜೀವ ಬೆದರಿಕೆ ಒಡ್ಡಿರುವುದಾಗಿ ಸೆ.೧೦ರಂದು ಪೊಲೀಸ್ ದೂರು ನೀಡಲಾಗಿತ್ತು. ಈ ಮಾಹಿತಿ ತಿಳಿಯುತ್ತಲೇ ಹಿಂದೂ ಸಂಘಟನೆಯ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿದರು. ಸಪ್ರೀಜ್‌ನನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದ್ದರು. ಪೊಲೀಸ್ ಅಧಿಕಾರಿಗಳಿಂದ ಆರೋಪಿಯ ಬಂಧನದ ಭರವಸೆ ಹಿನ್ನೆಲೆಯಲ್ಲಿ ಕಾರ್ಯಕರ್ತರು ತೆರಳಿದ್ದರು.
ಇದೊ೦ದು ಅಸಂಜ್ಞೆಯ ಅಪರಾಧವಾಗಿರುವುದರಿಂದ ಪ್ರಕರಣ ದಾಖಲಿಸುವ ಅನುಮತಿ ನೀಡುವಂತೆ ನ್ಯಾಯಾಲಯಕ್ಕೆ ಪೊಲೀಸರು ಕೋರಿಕೆ ಪತ್ರ ಸಲ್ಲಿಸಿದರು. ನ್ಯಾಯಾಲಯದ ಅನುಮತಿಯ೦ತ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಯಿತು. ಬಳಿಕ ಪೊಲೀಸರು ಬಜ್ಜೆಯಲ್ಲಿ ಅರೋಪಿಯನ್ನು ಬಂಧಿಸಿ ಕರೆತಂದರು. ಸೆ.11ರಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆತನನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ.