ಸಬಳೂರು ಶಾಲೆಗೆ ಕಂಪ್ಯೂಟರ್ ಕೊಡುಗೆ

0

ರಾಮಕುಂಜ: ಕಡಬ ತಾಲೂಕು ಕೊಯಿಲ ಗ್ರಾಮದ ಸಬಳೂರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರಿನ ಉದ್ಯಮಿ ಹರಿಪ್ರಸಾದ್ ಆರ್.ರೆಂಜಳರವರು ತಮ್ಮ ಗುರು, ಸಬಳೂರು ಶಾಲಾ ಹಿರಿಯ ವಿದ್ಯಾರ್ಥಿಯಾಗಿರುವ ನಿವೃತ್ತ ಪ್ರಾಚಾರ್ಯ ದುಗ್ಗಪ್ಪ ಗೌಡ ಸಬಳೂರುರವರ ನಿರ್ದೇಶನದಂತೆ ಕಂಪ್ಯೂಟರ್ ಕೊಡುಗೆಯಾಗಿ ನೀಡಿದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಶೇಖರ ಗೌಡ, ಮುಖ್ಯಗುರು ವಾರಿಜ ಬಿ.,ರವರು ಕೊಡುಗೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here