ಪುತ್ತೂರು: ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಜಾಗೃತಿ ಹಾಗೂ ದಂಡ ವಿಧಿಸುವ ಕಾರ್ಯ ನಡೆಯುತ್ತಿದ್ದು, ಸೆ. 12ರಂದು ಬೆಳಿಗ್ಗೆ ನಗರಸಭೆ ಅಧಿಕಾರಿಗಳು ವಿವಿಧ ಅಂಗಡಿಗಳಿಗೆ ದಾಳಿ ನಡೆಸಿ ಏಕ ಬಳಕೆ ಪ್ಲಾಸ್ಟಿಕ್‌ಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.
ದರ್ಬೆಯ ಪರಿಸರದಲ್ಲಿ ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕರಾದ ರಾಮಚಂದ್ರ ಮತ್ತು ವರಲಕ್ಷ್ಮೀ ಅವರು ತರಕಾರಿ, ಜಿನಸು, ಮಾಂಸದ ಅಂಗಡಿಗಳಲ್ಲಿ ಪರಿಶೀಲನೆ ನಡೆಸಿದಾಗ ಲಭ್ಯವಾದ ಏಕ ಬಳಕೆ ಪ್ಲಾಸ್ಟಿಕ್‌ಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆ. ನಗರಸಭೆ ಸ್ಯಾನಿಟರಿ ಸೂಪರ್‌ವೈಸರ್ ನಾಗೇಶ್, ಚಾಲಕ ಕೃಷ್ಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.