ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಫಿಲೋಮಿನಾ ಪಿಯು ಕಾಲೇಜಿನ ವರ್ಷಾ ದೈತೋಟ ರಾಜ್ಯ ಮಟ್ಟಕ್ಕೆ

0

ಪುತ್ತೂರು: ಮಂಗಳೂರು ಶಾರದಾ ಪದವಿ ಪೂರ್ವ ಕಾಲೇಜಿನ ವತಿಯಿಂದ ದೇರಳಕಟ್ಟೆ ನಿಟ್ಟೆ ಮೆಡಿಕಲ್ ಕಾಲೇಜು ಒಳಾಂಗಣ ಕ್ರೀಡಾಂಗಣದಲ್ಲಿ ಸೆ.9 ರಂದು ಜರಗಿದ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ದರ್ಬೆ ಫಿಲೋನಗರದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ವರ್ಷಾ ದೈತೋಟರವರು ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

ವರ್ಷಾ ದೈತೋಟರವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಎಲ್ಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯರವರು ತರಬೇತಿ ನೀಡಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಸಂಚಾಲಕ ವಂ|ಲಾರೆನ್ಸ್ ಮಸ್ಕರೇನ್ಹಸ್, ಪ್ರಾಂಶುಪಾಲ ವಂ|ಅಶೋಕ್ ರಾಯನ್ ಕ್ರಾಸ್ತಾ, ಕ್ಯಾಂಪಸ್ ನಿರ್ದೇಶಕ ವಂ|ಸ್ಟ್ಯಾನಿ ಪಿಂಟೋರವರು ಮೆಚ್ಚುಗೆ ಸೂಚಿಸಿದ್ದಾರೆ. ವರ್ಷಾ ದೈತೋಟರವರು ಕೃಷ್ಣಪ್ರಸಾದ್ ಹಾಗೂ ಶೋಭ ದಂಪತಿ ಪುತ್ರಿ.

LEAVE A REPLY

Please enter your comment!
Please enter your name here