ರೋಟೊಕ್ವಿಜ್ ಅಂತರ್ ಕಾಲೇಜು ರಸಪ್ರಶ್ನೆ ಸ್ಪರ್ಧೆ: ಫಿಲೋಮಿನಾ ಪಿಯು ಕಾಲೇಜು ದ್ವಿತೀಯ

0

ಪುತ್ತೂರು: ರೋಟರಿ ಕ್ಲಬ್ ಬೆಂಗಳೂರು ಹಾಗೂ ರೋಟರಿ ಕ್ಲಬ್ ಮಂಗಳೂರು ಇವರ ಸಹಯೋಗದಲ್ಲಿ ಸೆ.11 ರಂದು ಮಂಗಳೂರು ಎಸ್‌ಡಿಎಂ ಪಿಜಿ ಫಾರ್ ಮ್ಯಾನೇಜ್ಮೆಂಟ್ ಸ್ಟಡೀಸ್ ಆಂಡ್ ರಿಸರ್ಚ್ ಸೆಂಟರ್‌ನ ಕಾನ್ಫರೆನ್ಸ್ ಸಭಾಂಗಣದಲ್ಲಿ ಜರಗಿದ 63ನೇ ರಾಮನಾರಾಯಣ ಚೆಲ್ಲರಂ ಶೀಲ್ಡ್ ಹೆಸರಿನಲ್ಲಿ ರೋಟೊಕ್ವಿಜ್ ಅಂತರ್ ಕಾಲೇಜು ರಸಪ್ರಶ್ನೆ ಸ್ಪರ್ಧೆಯಲ್ಲಿ ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ದರ್ಬೆ ಫಿಲೋನಗರದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನವನ್ನು ಗಳಿಸಿದೆ.

ಮಂಗಳೂರು ವಿಭಾಗದ ರಸಪ್ರಶ್ನೆ ಸುತ್ತಿನಲ್ಲಿ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಎಡ್ಸೆಲ್ ಶನನ್ ಡಿ’ಸೋಜ ಹಾಗೂ ಸಿಂಚನಾ ಟಿ.ರವರು ದ್ವಿತೀಯ ಸ್ಥಾನವನ್ನು ಪಡೆಯುವ ಮೂಲಕ ಸಾಧನೆ ಮಾಡಿರುತ್ತಾರೆ. ಈ ವಿಭಾಗದಲ್ಲಿ 72 ತಂಡಗಳು ಭಾಗವಹಿಸಿದ್ದವು. ಕಾಲೇಜಿನ ಸಂಖ್ಯಾಶಾಸ್ತ್ರ ವಿಭಾಗದ ಉಪನ್ಯಾಸಕ ಭರತ್ ಜಿ.ಪೈಯವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಸಂಚಾಲಕ ವಂ|ಲಾರೆನ್ಸ್ ಮಸ್ಕರೇನ್ಹಸ್, ಪ್ರಾಂಶುಪಾಲ ವಂ|ಅಶೋಕ್ ರಾಯನ್ ಕ್ರಾಸ್ತಾ, ಕ್ಯಾಂಪಸ್ ನಿರ್ದೇಶಕ ವಂ|ಸ್ಟ್ಯಾನಿ ಪಿಂಟೋರವರು ಮೆಚ್ಚುಗೆ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here