ಮಹಿಳೆಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದ ಆರೋಪಿಗೆ ನಿರೀಕ್ಷಣಾ ಜಾಮೀನು

0

ಪುತ್ತೂರು: ಮಹಿಳೆಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದ ಆರೋಪಿಗೆ ಪುತ್ತೂರಿನ ಐದನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
2022ರ ಜುಲೈ 11ರಂದು ಬನ್ನೂರಿನ‌ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಆರೋಪದಡಿ ಬನ್ನೂರು ಗ್ರಾಮದ ನೆಕ್ಕಿಲ ನಿವಾಸಿ ವಸಂತ‌ ಕುಮಾರ್ ಎಂಬವರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ‌ ಕೇಸು ದಾಖಲಾಗಿತ್ತು. ಬಳಿಕ ತಲೆ ಮರೆಸಿಕೊಂಡಿದ್ದ ಆರೋಪಿ ವಸಂತ ಕುಮಾರ್ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.‌ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿ‌ ಪರ ವಕೀಲರಾದ ಉದಯಚಂದ್ರ ಕೆ‌ ಮತ್ತು ಅಕ್ಷಿತ್ ಎಮ್. ವಾದಿಸಿದ್ದರು.

LEAVE A REPLY

Please enter your comment!
Please enter your name here