ಗುಂಡ್ಯ: ಬಸ್ಸು-ಟ್ಯಾಂಕರ್ ಡಿಕ್ಕಿ, ಐವರಿಗೆ ಗಾಯ

0

ನೆಲ್ಯಾಡಿ: ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಗ್ಯಾಸ್ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ ಬಸ್ಸಿನಲ್ಲಿದ್ದ ಐವರು ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಸೆ.11ರಂದು ಮಧ್ಯಾಹ್ನ ನಡೆದಿದೆ.

ಧರ್ಮಸ್ಥಳದಿಂದ ನಂಜನಗೂಡುಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಹಾಸನ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ಮಧ್ಯೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಶಿರಾಡಿ ಗಡಿ ದೇವಸ್ಥಾನದ ಸಮೀಪ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಐವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಟ್ಯಾಂಕರ್ ಚಾಲಕ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ರಸ್ತೆಯ ತೀರಾ ಬಲಬದಿಗೆ ಟ್ಯಾಂಕರ್ ಚಲಾಯಿಸಿಕೊಂಡು ಬಂದ ಪರಿಣಾಮ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಬಸ್ ಚಾಲಕ ಮೈಸೂರು ಗಾಂಽನಗರ ನಿವಾಸಿ ಅನಿಲ್‌ಕುಮಾರ್ ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here