ಪುತ್ತೂರು: ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೀರಿಗ ಅಂಗನವಾಡಿ ಕೇಂದ್ರದಲ್ಲಿ ಸೆ.15ರಂದು ಬೆಳಗ್ಗೆ 10 ಗಂಟೆಗೆ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಹಾಗೂ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ಜರಗಲಿದೆ. ಕಾರ್ಯಕ್ರಮದಲ್ಲಿ ಸಮುದಾಯದತ್ತ ಸಾಂತ್ವನದ ಸಮಾಲೋಚನೆ – ಸಂವಾದ – ಸಂಕಲ್ಪ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.