





ಸವಣೂರು : ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣೂರು, ಪುಣ್ಚಪ್ಪಾಡಿ, ಪಾಲ್ತಾಡಿ ಗ್ರಾಮಗಳ ವ್ಯಾಪ್ತಿಯ 2022-23ನೇ ಸಾಲಿನ ಗ್ರಾಮ ಸಭೆಯು ಸೆ.13ರಂದು ಸವಣೂರು ವಿನಾಯಕ ಸಭಾಭವನದಲ್ಲಿ ನಡೆಯಿತು.

ನೋಡಲ್ ಅಧಿಕಾರಿಯಾಗಿ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ವಿಷ್ಣು ಪ್ರಸಾದ್ ಸಭೆ ನಡೆಸಿಕೊಟ್ಟರು. ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ ಅವರು ವಹಿಸಿದ್ದರು. ಗ್ರಾಮ ಸಭೆಯಲ್ಲಿ ಗ್ರಾಮಾಭಿವೃದ್ದಿ ಕಾರ್ಯಗಳ ಕುರಿತು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
ಗ್ರಾ.ಪಂ. ಉಪಾಧ್ಯಕ್ಷ ಶೀನಪ್ಪ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ಮನ್ಮಥ, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.








