ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಮಾವೇಶ ಇತ್ತೀಚೆಗೆ ನಡೆಯಿತು. ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದ ವಿವೇಕಾನಂದ ಪಾಲಿಟೆಕ್ನಿಕ್ನ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವೇಶ್ವರ ಭಟ್ ಬಂಗಾರಡ್ಕ ಮಾತನಾಡುತ್ತಾ, ಇದೊಂದು ಸೌಹಾರ್ದ ಬೆಸೆಯುವ ಕಾರ್ಯಕ್ರಮ. ನಾವೆಲ್ಲರೂ ಒಟ್ಟಾಗಿ ಈ ಸಂಸ್ಥೆಯನ್ನು ಇನ್ನೂ ಎತ್ತರಕ್ಕೆ ಬೆಳೆಸೋಣ ಎಂದು ಶುಭ ನುಡಿದರು.
ಹಿರಿಯ ವಿದ್ಯಾರ್ಥಿ ದೇವಿಪ್ರಸಾದ್ ರವರು ದೇಣಿಗೆಯಾಗಿ ನೀಡಿದ ಕಲರ್ ಪ್ರಿಂಟರನ್ನು ಕಾಲೇಜಿಗೆ ಹಸ್ತಾಂತರಿಸಲಾಯಿತು. ನರಸಿಂಹ ನಾಯಕರವರು ಗ್ರಂಥಾಲಯಕ್ಕೆ ಪುಸ್ತಕಗಳನ್ನು ದೇಣಿಗೆಯಾಗಿ ನೀಡಿದರು. ಪ್ರಾಂಶುಪಾಲರಾದ ಚಂದ್ರಕುಮಾರ್ ಹಿರಿಯ ವಿದ್ಯಾರ್ಥಿಗಳನ್ನು ಸ್ವಾಗತಿಸುತ್ತಾ ಕಾಲೇಜು ಬೆಳೆದು ಬಂದ ರೀತಿಯನ್ನು ವಿವರವಾಗಿ ತಿಳಿಸಿಕೊಟ್ಟರು. ಹಿರಿಯ ವಿದ್ಯಾರ್ಥಿಗಳು ತಮ್ಮ ಪರಿಚಯದೊಂದಿಗೆ ಅಭಿಪ್ರಾಯಗಳನ್ನು ಹಂಚಿಕೊಂಡರು.
ವಿವೇಕಾನಂದ ಪಾಲಿಟೆಕ್ನಿಕ್ನ ಆಡಳಿತ ಮಂಡಳಿಯ ಖಜಾಂಜಿ ನರಸಿಂಹ ಪೈ, ಸದಸ್ಯರಾದ ಈಶ್ವರಚಂದ್ರ, ರವಿ ಮುಂಗ್ಲಿಮನೆ, ಉಷಾ ಭಟ್ ಮುಳಿಯ ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಪ್ರಾರ್ಥನೆಯ ಮೂಲಕ ಸಂಸ್ಥೆಯ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಭಾಗದ ಹಿರಿಯ ಉಪನ್ಯಾಸಕಿ ಹಾಗೂ ಹಿರಿಯ ವಿದ್ಯಾರ್ಥಿ ಜಯಲಕ್ಷ್ಮಿ ನೆರವೇರಿಸಿದರು. ಧನ್ಯವಾದ ಸಮರ್ಪಣೆಯನ್ನು ಕಂಪ್ಯೂಟರ್ ಸೈನ್ಸ್ ವಿಭಾಗದ ಹಿರಿಯ ಉಪನ್ಯಾಸಕಿ ಪುಷ್ಪಾ ಬಿ.ಯನ್. ನೆರವೇರಿಸಿದರು. ಕಾರ್ಯಕ್ರಮದ ನಿರ್ವಹಣೆಯನ್ನು ಆಟೋಮೋಬೈಲ್ ವಿಭಾಗದ ಉಪನ್ಯಾಸಕರಾದ ಗುರುರಾಜ್ ನಡೆಸಿಕೊಟ್ಟರು. ವಿವೇಕಾನಂದ ಪಾಲಿಟೆಕ್ನಿಕ್ನ ಎಲ್ಲಾ ಶಿಕ್ಷಕ, ಶಿಕ್ಷಕೇತರ ವರ್ಗದವರು ಸಹಕರಿಸಿದರು. ಸುಮಾರು 200 ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.