ನೆಲ್ಯಾಡಿ: ಶ್ರೀರಾಮ ಶಾಲೆಯಲ್ಲಿ ಸಾಮೂಹಿಕ ಹುಟ್ಟುಹಬ್ಬ

0

ನೆಲ್ಯಾಡಿ: ಶ್ರೀರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿಯಲ್ಲಿ ಸಾಮೂಹಿಕ ಹುಟ್ಟುಹಬ್ಬ ಸೆ.10ರಂದು ಆಚರಿಸಲಾಯಿತು. ಅತಿಥಿಗಳಾಗಿ ಆಗಮಿಸಿದ್ದ ನೆಲ್ಯಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್ ಮತ್ತು ಸುಚಿತ್ರ ಬಂಟ್ರಿಯಾಲ್ ದಂಪತಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿ ನೀಡಿ, ತಿಲಕ ಇಟ್ಟು ಆಶೀರ್ವದಿಸಿದರು. ಸಂಸ್ಕಾರ ಕೊಡುವುದನ್ನು ಈ ವಿದ್ಯಾಲಯವು ವಿದ್ಯಾರ್ಥಿಗಳಿಗೆ ಕಲ್ಪಿಸಿದೆ ಎಂದು ಹೇಳಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಾಲಾ ಮುಖ್ಯಶಿಕ್ಷಕ ಗಣೇಶ್ ವಾಗ್ಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀಮತಿ ಅಶ್ವಿನಿ ಮಾತಾಜಿ ಸ್ವಾಗತಿಸಿ, ಕುಮಾರಿ ತ್ರಿವೇಣಿ ಮಾತಾಜಿ ವಂದಿಸಿದರು. ದಿವ್ಯ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here