ಬೆಳಂದೂರು ಕಾಲೇಜಿನ ಶಿಕ್ಷಕ- ರಕ್ಷಕ ಸಂಘದ ಸಭೆ- ಸಮಿತಿ ರಚನೆ ; ಅಧ್ಯಕ್ಷರಾಗಿ ವಿಠಲ ಗೌಡ ಅಗಳಿ, ಉಪಾಧ್ಯಕ್ಷರಾಗಿ ಬಾಲಕೃಷ್ಣ ಬಸ್ತಿ

0

ಕಾಣಿಯೂರು : ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ವತಿಯಿಂದ ಶಿಕ್ಷಕ-ರಕ್ಷಕ ಸಂಘದ ಸಭೆ ನಡೆಯಿತು. ಪೆರುವಾಜೆ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂಗ್ಲ ಭಾ಼ಷಾ ಸಹಾಯಕ ಪ್ರಾಧ್ಯಾಪಕರಾದ ಪ್ರೊ.ಯತೀಶ್ ಕುಮಾರ್ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ, ಪ್ರಸ್ತುತ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಕ ಪೋಷಕರ ಜವಾಬ್ದಾರಿಗಳು ಅತೀ ಮುಖ್ಯವಾಗಿದ್ದು ಸಮಾಜದಲ್ಲಿ ಇಂದು ಘಟಿಸುತ್ತಿರುವ ಬದಲಾವಣೆಗಳ ಬಗ್ಗೆ ವಿದ್ಯಾರ್ಥಿಗಳನ್ನು ಎಚ್ಚರಿಸುತ್ತ ಸಮಾಜ ವಿರೋಧಿ ಮನಸ್ಥಿತಿ ಬೆಳಯದಂತೆ ಜಾಗೃತಿ ವಹಿಸಬೇಕು ಹಾಗೂ ಮೊಬೈಲ್ ಬಳಕೆಯ ಮೇಲೆ ನಿಗಾ ವಹಿಸಬೇಕೆಂದು ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ, ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಸಂತೋಷ ಕುಮಾರ್ ಮರಕ್ಕಡ ಮಾತನಾಡಿ, ವಿದ್ಯಾರ್ಥಿಗಳು ಸಹಬಾಳ್ವೆ ಸಹಕಾರ ಸೌಹಾರ್ದತೆಯನ್ನು ರೂಢಿಸಿಕೊಂಡು ಸಮಾಜದಲ್ಲಿ ಗೌರವಯುತ ಜೀವನ ನಡೆಸುವಂತಾಗಬೇಕೆಂದರು. ಕಾಲೇಜಿನ ಪ್ರಾಂಶುಪಾಲರಾದ ಡಾ‌.ಶಂಕರ ಭಟ್ ‌.ಪಿ ಉಪಸ್ಥಿತರಿದ್ದರು. ಉಪನ್ಯಾಸಕ ಸ್ವಾಮಿ.ಎಸ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೇಯಾ ಕಾರ್ಯಕ್ರಮ ನಿರೂಪಿಸಿ , ರಮ್ಯಾಶ್ರೀ ವಂದಿಸಿದರು.

ಶಿಕ್ಷಕ- ರಕ್ಷಕ ಸಮಿತಿಗೆ ಆಯ್ಕೆ:

ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಬೆಳಂದೂರು ಗ್ರಾಮ ಪಂಚಾಯತ್ ಸದಸ್ಯ ವಿಠಲ ಗೌಡ ಅಗಳಿ ಮತ್ತು ಉಪಾಧ್ಯಕ್ಷರಾಗಿ ನಿವೃತ್ತ ಯೋಧ ಬಾಲಕೃಷ್ಣ ಬಸ್ತಿಯವರು ಆಯ್ಕೆಯಾದರು.

LEAVE A REPLY

Please enter your comment!
Please enter your name here