ನೆಲ್ಯಾಡಿ: ತಾ|ಮಟ್ಟದ ಪ.ಪೂ.ಕಾಲೇಜು ವಿಭಾಗದ ಬಾಲಕ-ಬಾಲಕಿಯರ ಕಬ್ಬಡಿ ಪಂದ್ಯಾಟ

0

ನೆಲ್ಯಾಡಿ: ಪದವಿಪೂರ್ವ ಶಿಕ್ಷಣ ಇಲಾಖೆ ದ.ಕ. ಮಂಗಳೂರು ಮತ್ತು ಸಂತಜಾರ್ಜ್ ಪದವಿಪೂರ್ವ ಕಾಲೇಜು ನೆಲ್ಯಾಡಿ ಇವರ ಆಶ್ರಯದಲ್ಲಿ ಕಡಬ ತಾಲೂಕು ಮಟ್ಟದ ಬಾಲಕ ಹಾಗೂ ಬಾಲಕಿಯರ ಕಬ್ಬಡಿ ಪಂದ್ಯಾಟ ಸೆ.೧೦ರಂದು ಸಂತಜಾರ್ಜ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು.

ಕಬಡ್ಡಿ ಕ್ರೀಡಾಪಟು ಶಿವರಾಮೆ ಗೌಡ ಏನೆಕಲ್‌ರವರು ಬೆಳಿಗ್ಗೆ ಕಬ್ಬಡಿ ಪಂದ್ಯಾಟ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕ್ರೀಡೆ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುವಂತಹದು. ಮಾನಸಿಕ ಸ್ಥಿರತೆ, ಶಾರೀರಿಕವಾಗಿ ವ್ಯಾಯಾಮ, ಅಕ್ರಮಣ ಶೀಲತೆಯಂತಹ ಮನೋಭಾವವನ್ನು ಜಾಗ್ರತಗೊಳಿಸುವುದರೊಂದಿಗೆ, ಕ್ರೀಡೆಯಲ್ಲಿ ತೊಡಗಿಸಿಕೊಂಡವರಿಗೆ ಉದ್ಯೋಗದಲ್ಲಿ ಉತ್ತಮ ಅವಕಾಶಗಳಿವೆ. ಯೇಸುದಾಸ್, ಅಭಿಷೇಕ್ ಶೆಟ್ಟಿಯಂತಹ ರಾಷ್ಟ್ರಮಟ್ಟದ ಕ್ರೀಡಾಪಟುಗಳನ್ನು ಬೆಳೆಸಿದ ನೆಲ್ಯಾಡಿಯಂತಹ ಊರಿನಲ್ಲಿ ಈ ಕ್ರೀಡಾಕೂಟ ನಡೆಯುತ್ತಿರುವುದು ನಮಗೆ ಹೆಮ್ಮೆ ತರುವಂತಹದು ಎಂದರು.

ಸಂತಜಾರ್ಜ್ ವಿದ್ಯಾಸಂಸ್ಥೆಯ ಸಂಚಾಲಕ ಅಬ್ರಹಾಂ ವರ್ಗೀಸ್‌ರವರು ಸಭಾಧ್ಯಕ್ಷತೆ ವಹಿಸಿ ಮಾತನಾಡಿ, ಹಲವು ಕ್ರೀಡಾಕೂಟಗಳನ್ನು ಆಯೋಜಿಸಿದ ನಮಗೆ ಈ ಕ್ರೀಡಾಕೂಟ ನಡೆಸಲು ಸಿಕ್ಕಿರುವ ಅವಕಾಶ ತುಂಬಾ ಖುಷಿ ತಂದಿದೆ ಎಂದರು. ಕಾಲೇಜಿನ ಪ್ರಾಂಶುಪಾಲ ಏಲಿಯಾಸ್ ಎಂ ಕೆ., ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು, ದೈಹಿಕ ಶಿಕ್ಷಣ ಶಿಕ್ಷಕ ಮಹಮ್ಮದ್ ಹ್ಯಾರೀಸ್ ವಂದಿಸಿದರು. ಉಪನ್ಯಾಸಕ ಚೇತನ್ ಆನೆಗುಂಡಿ ನಿರೂಪಿಸಿದರು.

LEAVE A REPLY

Please enter your comment!
Please enter your name here