ನೆಲ್ಯಾಡಿ: ಜೆಸಿಐ ನೆಲ್ಯಾಡಿ, ಮಹಿಳಾ ಜೇಸಿ ಹಾಗೂ ಜೂನಿಯರ್ ಜೇಸಿವಿಂಗ್‌ನ 39ನೇ ವರ್ಷದ ಜೇಸಿ ಸಪ್ತಾಹ; ನಮಸ್ತೆ-2022ರ 6ನೇ ದಿನವಾದ ಸೆ.14ರಂದು ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಮಧುಮೇಹ ರೋಗ ಪರೀಕ್ಷೆ ಮತ್ತು ಮಾಹಿತಿ ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿದ್ದ ಅಶ್ವಿನಿ ಆಸ್ಪತ್ರೆಯ ಆಡಳಿತಾಧಿಕಾರಿ, ನೆಲ್ಯಾಡಿ ಜೆಸಿಐನ ಪೂರ್ವಾಧ್ಯಕ್ಷರೂ ಆದ ಡಾ.ಮುರಳೀಧರ, ಮುಖ್ಯ ಅತಿಥಿಯಾಗಿದ್ದ ನೆಲ್ಯಾಡಿ ಜೆಸಿಐ ಪೂರ್ವಾಧ್ಯಕ್ಷ ವಿ.ಆರ್.ಹೆಗ್ಡೆಯವರು ಮಾಹಿತಿ ನೀಡಿದರು. ಪೂರ್ವಾಧ್ಯಕ್ಷ ಚಂದ್ರಶೇಖರ ಬಾಣಜಾಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮೋಹನ್‌ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸುಚಿತ್ರಾ ಜೆ. ಬಂಟ್ರಿಯಾಲ್ ಜೇಸಿವಾಣಿ ವಾಚಿಸಿದರು. ಯೋಜನಾ ನಿರ್ದೇಶಕ ಶಿವಪ್ರಸಾದ್‌ರವರು ಜೇಸಿ ಸಪ್ತಾಹದ ವಿವರಣೆ ನೀಡಿದರು. ಜೆಸಿ ಅಧ್ಯಕ್ಷೆ ಜಯಂತಿ ಬಿ.ಎಂ.ಅಧ್ಯಕ್ಷತೆ ವಹಿಸಿದ್ದರು. ಅಶ್ವಿನಿ ಆಸ್ಪತ್ರೆಯ ಮೇನೇಜರ್ ಸುಮಂತ್ ಭಟ್‌ರವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಜಯಾನಂದ ಬಂಟ್ರಿಯಾಲ್ ವಂದಿಸಿದರು. ಜೆಸಿಐನ ಪೂರ್ವಾಧ್ಯಕ್ಷರು, ಸದಸ್ಯರು, ಅಶ್ವಿನಿ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಮಧುಮೇಹ ರೋಗದ ಉಚಿತ ತಪಾಸಣೆ ನಡೆಸಲಾಯಿತು.