ಸೆ.17 : ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ರವರಿಂದ ಮುರ ಗೌಡ ಸಮುದಾಯ ಭವನದಲ್ಲಿ ಗ್ರಾಮವಾಸ್ತವ್ಯ

0

ಪುತ್ತೂರು : ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ರವರು ಸೆಪ್ಟೆಂಬರ್ ತಿಂಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುರ ಗೌಡ ಸಮುದಾಯ ಭವನದಲ್ಲಿ ಸೆ.17ರಂದು ಬೆಳಿಗ್ಗೆ 11ರಿಂದ ನಡೆಯಲಿದೆ. ಈ ಸಂದರ್ಭದಲ್ಲಿ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ ಕೆಲವೊಂದು ಸಮಸ್ಯೆಗಳನ್ನು ಆದಷ್ಟು ಸ್ಥಳದಲ್ಲಿಯೇ ಬಗೆಹರಿಸಲು ಉದ್ಧೇಶಿಸಲಾಗಿದೆ. ಆದುದರಿಂದ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯ ಹಾಜರಿರಬೇಕು ಎಂದು ಅಪರ ಜಿಲ್ಲಾದಿಕಾರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here