ಪುತ್ತೂರು: ಪುತ್ತೂರು ಉಪ್ಪಿನಂಗಡಿ ಚತುಷ್ಪತ ರಸ್ತೆಯ ಚಿಕ್ಕಮುಡ್ನೂರು ಗ್ರಾಮದ ದಾರಂದಕುಕ್ಕುವಿನಲ್ಲಿ ಬಸ್ ಪ್ರಯಾಣಿಕರ ತಂಗುದಾಣದ ಸ್ಥಳ ವಿವಾದಕ್ಕೆ ಸಂಬಂಧಿಸಿ ಲೋಕೋಪಯೋಗಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಂಜಿನಿಯರ್‌ನ ಉನ್ನತ ಮಟ್ಟದ ಅಧಿಕಾರಿಗಳು ಸೆ.15ರಂದು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಬನ್ನೂರು ಪಂಚಾಯತ್ ಅಧ್ಯಕ್ಷರು ಸಹಿತ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದ್ದರು.
ನಮ್ಮ ಮನೆಯ ಗೇಟ್ ಮುಂದೆ ಬಸ್ ತಂಗುದಾಣ ನಿರ್ಮಾಣ ಮಾಡುತ್ತಿರುವ ಕುರಿತು ಮಾಜಿ ಸೈನಿಕ ಸುನಿಲ್ ರೇಗೋ ಅವರ ತಾಯಿ ಹಿಲ್ಡಾ ರೇಗೋ ಅವರ ದೂರಿನಂತೆ ಲೋಕೋಪಯೋಗಿ ಇಲಾಖೆ ಹಿರಿಯ ಕಾರ್ಯಪಾಲಕ ಇಂಜಿನಿಯರ್ ಯಶವಂತ್ ಮತ್ತು ಪಂಚಾಯತ್ ರಾಜ್ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಬನ್ನೂರು ಪಂಚಾಯತ್ ಅಧ್ಯಕ್ಷೆ ಜಯ ಸಹಿತ ಗ್ರಾಮಸ್ಥರು ಜಮಾಯಿಸಿದ್ದರು. ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಾಜಾರಾಮ್, ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಮೋದ್, ಪಂಚಾಯತ್ ರಾಜ್ ಇಂಜಿನಿಯರ್ ಭರತ್ ಉಪಸ್ಥಿತರಿದ್ದರು.