ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದ ದೋಷ ಪರಿಹಾರಾರ್ಥ ದೈವಜ್ಞರ ಸೂಚನೆಯಂತೆ ಬೇರೆ ಬೇರೆ ದೇವಸ್ಥಾನದಲ್ಲಿ ಸೇವೆಗಳನ್ನು ನೀಡಲಾಗುತ್ತಿದ್ದು, ಸೆ.17ರಂದು ಮಹಾಲಿಂಗೇಶ್ವರ ದೇವಸ್ಥಾನದಿಂದ ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸೇವಾ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ ಗಂಟೆ 12.30ಕ್ಕೆ ಪೂಜಾ ಸೇವಾ ಕಾರ್ಯಕ್ರಮ ನಡೆಯಲಿದ್ದು, ಅದೇ ದಿನ ಸೋಣ ಶನಿವಾರದ ವಿಶೇಷ ಬಲಿವಾಡು ಕೂಟ ನೆರವೇರಲಿದೆ. ರಾತ್ರಿ ಗಂಟೆ 7.30ಕ್ಕೆ ಸಂಕ್ರಮಣದ ರಂಗಪೂಜೆ ಜರುಗಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಧು ನರಿಯೂರು ಅವರು ವಿನಂತಿಸಿದ್ದಾರೆ.