ಸೆ.17: ಪ್ರಧಾನಿ ಮೋದಿರವರ ಹುಟ್ಟುಹಬ್ಬದ ಪ್ರಯುಕ್ತ ಬಿ.ಜೆ.ಪಿ. ಯುವಮೋರ್ಚಾದಿಂದ ರಕ್ತದಾನ ಶಿಬಿರ

0

ಪುತ್ತೂರು : ಪ್ರಧಾನಿ ನರೇಂದ್ರ ಮೋದಿಯವರ 71ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಬಿ.ಜೆ.ಪಿ ಯುವಮೋರ್ಚ ಗ್ರಾಮಾಂತರ ಮಂಡಲ ಹಾಗೂ ನಗರ ಮಂಡಲದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ಪುತ್ತೂರು ಟೌನ್‌ಬ್ಯಾಂಕ್ ಹಾಲ್‌ನಲ್ಲಿ ಸೆ.17 ರಂದು ಬೆಳಿಗ್ಗೆ ನಡೆಯಲಿದೆ. ಬೆಳಿಗ್ಗೆ 9.30 ಗಂಟೆಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಲಿದ್ದು, ಪಕ್ಷದ ಪ್ರಮುಖರು ಉಪಸ್ಥಿತರಿರುತ್ತಾರೆ, ಪಕ್ಷದ ಕಾರ್ಯಕರ್ತರು ಹಾಗೂ ಮೋದಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪುತ್ತೂರು ಗ್ರಾಮಾಂತರ ಮಂಡಲ ಯುವಮೋರ್ಚಾ ಅಧ್ಯಕ್ಷ ನವೀನ್ ಪಡ್ನೂರು ಹಾಗೂ ನಗರ ಮಂಡಲ ಯುವಮೋರ್ಚ ಅಧ್ಯಕ್ಷ ಸಚಿನ್ ಶೆಣೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here