ಸೆ.17- ಬೆಳಂದೂರು ಗ್ರಾಮ ಸಭೆ

0

ಕಾಣಿಯೂರು: ಬೆಳಂದೂರು ಗ್ರಾ.ಪಂ ವ್ಯಾಪ್ತಿಯ ಬೆಳಂದೂರು, ಕುದ್ಮಾರು, ಕಾಮಣ ಗ್ರಾಮಗಳ 2022-23ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಸೆ.17ರಂದು ಬೆಳಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾ.ಪಂ ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕಡಬ ತಾಲೂಕು ಪಂಚಾಯತ್‌ನ ಕಾರ್ಯನಿರ್ವಹಣಾಧಿಕಾರಿಯವರು ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಲಿದ್ದು, ಗ್ರಾಮ ಪಂಚಾಯತ್ ಕ್ಷೇತ್ರಕ್ಕೆ ಒಳಪಟ್ಟ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸಿ, ಗ್ರಾಮೀಣ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸೂಕ್ತ ಸಲಹೆ- ಸೂಚನೆಗಳನ್ನು ನೀಡುವಂತೆ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ್ ಕೆ. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here