





ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಯವರು ರಜೆಯಲ್ಲಿರುವುದರಿಂದ ಸೆ. 17ರಂದು ಕಬಕ ಗ್ರಾಮದ ಮುರದಲ್ಲಿರುವ ಗೌಡ ಸಮುದಾಯ ಭವನದಲ್ಲಿ ನಡೆಯಲಿರುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಎಚ್.ಕೆ. ಕೃಷ್ಣಮೂರ್ತಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಎಚ್.ಕೆ. ಕೃಷ್ಣಮೂರ್ತಿಯವರು ಈ ಹಿಂದೆ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದರು. ಬಳಿಕ ವರ್ಗಾವಣೆಗೊಂಡು ವಿವಿದೆಡೆ ಕಾರ್ಯ ನಿರ್ವಹಿಸಿದ್ದರು. ಪ್ರಸ್ತುತ ದ.ಕ. ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿದ್ದಾರೆ.














