ಸೆ.18: ಆರೋಗ್ಯ ಉಚಿತ ತಪಾಸಣಾ ಶಿಬಿರ

0

ಪುತ್ತೂರು: ರೋಟರ್‍ಯಾಕ್ಟ್ ಕ್ಲಬ್ ಪುತ್ತೂರು, ಕಾರ್ಮಿಕ ಇಲಾಖೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಆರೋಗ್ಯ ಉಚಿತ ತಪಾಸಣಾ ಶಿಬಿರ ಸೆ.18ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ರೋಟರಿ ಟ್ರಸ್ಟ್ ಹಾಲ್‌ನಲ್ಲಿ ನಡೆಯಲಿದೆ.

ನೋಂದಾಯಿತ ಕಟ್ಟಡ ಮತ್ತು ಇತರೆ ಕಾರ್ಮಿಕರಿಗೆ ಹಾಗೂ ಅವರ ಅವಲಂಭಿತರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬಹುದು. ಶಿಬಿರದಲ್ಲಿ 19 ವಿವಿಧ ರೀತಿಯ ತಪಾಸಣೆಯನ್ನು ಉಚಿತವಾಗಿ ಮಾಡಲಾಗುವುದು. ಶಿಬಿರದಲ್ಲಿ ಪಾಲ್ಗೊಳ್ಳುವವರು ಆಧಾರ್ ಕಾರ್ಡ್‌ನ ಪ್ರತಿ ಹಾಗೂ ಪಡಿತರ ಚೀಟಿಯನ್ನು ಕಡ್ಡಾಯವಾಗಿ ತರಬೇಕು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here