ಪೆರಾಬೆ: ಆಲಂಕಾರು ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಸ್ಪರ್ಧೆ ಸೆ.14ರಂದು ಕುಂತೂರು ಸರಕಾರಿ ಉನ್ನತ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.
ಎಸ್‌ಡಿಎಂಸಿ ಅಧ್ಯಕ್ಷ ಹರೀಶ್ ಬಾಣಬೆಟ್ಟು ಅಧ್ಯಕ್ಷತೆ ವಹಿಸಿದ್ದರು. ಪೆರಾಬೆ ಗ್ರಾ.ಪಂ.ಸದಸ್ಯೆ ಮಮತಾ ಶೆಟ್ಟಿ ಅಂಬರಾಜೆ ಉದ್ಘಾಟಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ರಾಮಕೃಷ್ಣ ಮಲ್ಲಾರ, ಹೇಮಲತಾ ಬಾಕಿಲ, ಆಲಂಕಾರು ಸರಕಾರಿ ಉ.ಹಿ.ಪ್ರಾ.ಶಾಲಾ ಮುಖ್ಯಶಿಕ್ಷಕ ನಿಂಗರಾಜು, ಕುಂತೂರು ಶಾಲಾ ಮುಖ್ಯಶಿಕ್ಷಕ ರಮೇಶ್ ಎಸ್. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಆಲಂಕಾರು ಕ್ಲಸ್ಟರ್ ಮಟ್ಟದ 13 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹಿರಿಯ ವಿಭಾಗದಲ್ಲಿ ಕುಂತೂರು ಪದವು ಸರಕಾರಿ ಉ.ಹಿ.ಪ್ರಾ.ಶಾಲೆ ಪ್ರಥಮ, ಪೆರಾಬೆ ಸರಕಾರಿ ಹಿ.ಪ್ರಾ.ಶಾಲೆ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿತು. ಕಿರಿಯ ವಿಭಾಗದಲ್ಲಿ ಶ್ರೀ ಭಾರತಿ ಶಾಲೆ ಆಲಂಕಾರು ಪ್ರಥಮ ಹಾಗೂ ಕುಂತೂರುಪದವು ಸರಕಾರಿ ಉ.ಹಿ.ಪ್ರಾ.ಶಾಲೆ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಕಾರ್ಯಕ್ರಮಕ್ಕೆ ಪೆರಾಬೆ ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷ, ಸದಸ್ಯರುಗಳು, ಪೋಷಕರು, ವಿದ್ಯಾರ್ಥಿಗಳು, ಶಿಕ್ಷಕರು, ಗ್ರಾಮಸ್ಥರು ಪಾಲ್ಗೊಂಡಿದ್ದರು. ಶಿಕ್ಷಕಿ ನೀಲಮ್ಮ ನಿರೂಪಿಸಿ, ತ್ರಿವೇಣಿ ವಂದಿಸಿದರು.