ಪಾಣಾಜೆ: ಗ್ರಾಮೀಣ ಕ್ರೀಡಾಕೂಟ-ಕಬಡ್ಡಿ ಪಂದ್ಯಾಟ

0

ಪಾಣಾಜೆ: ಪಾಣಾಜೆ ಗ್ರಾಮ ಪಂಚಾಯತ್ ವತಿಯಿಂದ 2022-23 ನೇ ಸಾಲಿನ ಗ್ರಾಮೀಣ ಕ್ರೀಡಾಕೂಟದ ಪ್ರಯುಕ್ತ ಪುರುಷರ ಹಾಗೂ ಮಹಿಳೆಯರ ಮುಕ್ತ ಕಬಡ್ಡಿ ಪಂದ್ಯಾಟ ಸೆ. 14 ರಂದು ಪಾಣಾಜೆ ಮಾದರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು.

ಪಾಣಾಜೆ ಗ್ರಾ.ಪಂ. ಉಪಾಧ್ಯಕ್ಷ ಅಬೂಬಕ್ಕರ್ ಕೆ. ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷೆ ಶ್ರೀಮತಿ ಭಾರತಿ ಭಟ್ ಸಭಾಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಸುಬೋಧ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುಽರ್ ರೈ, ಬೆಟ್ಟಂಪಾಡಿ ಸ.ಹಿ.ಪ್ರಾ.ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸೀತಾರಾಮ ಗೌಡ ಮಿತ್ತಡ್ಕ, ಮುರ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುಧಾಕರ್ ರೈ, ಪಾಣಾಜೆ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಸುಂದರಿ ಎಂ. ತೀರ್ಪುಗಾರರಾಗಿ ಸಹಕರಿಸಿದರು. ಪಾಣಾಜೆ ಪ್ರಾಥಮಿಕ ಶಾಲೆಯ ಸಹಶಿಕ್ಷಕರಾದ ಮಾಂಕು ಮೂಲ್ಯ ನಿರೂಪಿಸಿದರು. ಪಂಚಾಯತ್ ಸದಸ್ಯರಾದ ಸುಭಾಷ್ ರೈ, ಕೃಷ್ಣಪ್ಪ ಪೂಜಾರಿ, ಮೋಹನ್ ನಾಯ್ಕ ಹಾಗೂ ಪಂಚಾಯತ್ ಸಿಬ್ಬಂದಿಗಳು, ಶಾಲಾ ಶಿಕ್ಷಕರು ಮತ್ತು ಸಾರ್ವಜನಿಕರು ವಿವಿಧ ರೀತಿಯಲ್ಲಿ ಸಹಕರಿಸಿದರು.

ವಿಜೇತರ ವಿವರ: ಪುರುಷರ ವಿಭಾಗದಲ್ಲಿ ಪ್ರಥಮ ಯಂಗ್‌ಸ್ಟಾರ್ಸ್ ಆರ್ಲಪದವು, ದ್ವಿತೀಯ ಬ್ರದರ್ಸ್ ಆರ್ಲಪದವು ಪ್ರಶಸ್ತಿ ಪಡೆದುಕೊಂಡವು. ಮಹಿಳಾ ವಿಭಾಗದಲ್ಲಿ ಕಾರ್ತಿಕೇಯ ದೇವಸ್ಯ ತಂಡ ಪ್ರಥಮ ಸ್ಥಾನ ಪಡೆದುಕೊಂಡಿತು.

LEAVE A REPLY

Please enter your comment!
Please enter your name here