ವಿಜ್ಞಾನ ವಿಚಾರ ಗೋಷ್ಠಿ ಸ್ಪರ್ಧೆ: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅನ್ವಿತ್.ಎನ್‌ ವಿಭಾಗೀಯ ಮಟ್ಟಕ್ಕೆ ಆಯ್ಕೆ

0

ಪುತ್ತೂರು:  ಕರ್ನಾಟಕ ರಾಜ್ಯ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ೨೦೨೨ನೇ ಸಾಲಿನ ಜಿಲ್ಲಾಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆ ಸೆ.16ರಂದು ನಡೆಯಿತು. ತೆಂಕಿಲದ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ಅನ್ವಿತ್‌ ಎನ್, 10ನೇತರಗತಿ [ಶ್ರೀಪತಿ ಎನ್‌ ಮತ್ತು ವಿದ್ಯಾಲಕ್ಷ್ಮಿ.ಎ ದಂಪತಿ ಪುತ್ರ] ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here