ನಿಡ್ಪಳ್ಳಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ – ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರ ಉದ್ಘಾಟನೆ.

0
ನಿಡ್ಪಳ್ಳಿ: ಪ್ರತಿಯೊಬ್ಬರಿಗೂ ತನ್ನ ಅರೋಗ್ಯ ಸರಿಯಾಗಿದ್ದರೆ ಮಾತ್ರ ಸುಖ ಜೀವನ ನಡೆಸಬಹುದು.ಹಾಗೆಯೇ ನಮ್ಮ ಪ್ರಮುಖ ಅಂಗ ಕಣ್ಣು ಸರಿಯಾಗಿ ಕಾಣುತ್ತಿದ್ದರೆ ನಾವು ಎಲ್ಲವನ್ನು ನೋಡಿ ಆನಂದ ಪಡಬಹುದು. ಆ ನಿಟ್ಟಿನಲ್ಲಿ ಕಣ್ಣಿನ ಸಮಸ್ಯೆ ಇದ್ದ ಪ್ರತಿಯೊಬ್ಬರೂ ಬಾಗವಹಿಸಿ ಈ ಶಿಬಿರದ ಸಂಪೂರ್ಣ ಪ್ರಯೋಜನ ಪಡೆದು ಕೊಳ್ಳಿ ಎಂದು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಕತ್ತಲೆಕಾನ ಹೇಳಿದರು.
ಅವರು ಸೆ.18 ರಂದು ನಿಡ್ಪಳ್ಳಿ ವಿಜಯನಗರದ ಪಾಣಾಜೆ ಸಿ.ಎ ಬ್ಯಾಂಕ್ ಶಾಖೆಯ ಸಭಾಭವನದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಶುಭ ಹಾರೈಸಿದರು.
 ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ.ಡಿ ಮಾತನಾಡಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿ ಶಿಬಿರ ಆಯೋಜಿಸಿದ ಎಲ್ಲ ಸಂಘಟನೆಗಳಿಗೂ ಕೃತಜ್ಞತೆ ಸಲ್ಲಿಸಿದರು.ಪ್ರಸಾದ್ ನೇತ್ರಾಲಯದ ಡಾ.ಅವಿನಾಶ್, ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಬೋರ್ಕರ್ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ನಿಡ್ಪಳ್ಳಿ ಒಕ್ಕೂಟದ ಅಧ್ಯಕ್ಷ ರಾಧಾಕೃಷ್ಣ ಪಾಟಾಳಿ,ಸೇವಾ ಪ್ರತಿನಿಧಿ ಜಗನ್ನಾಥ ಪಾಟಾಳಿ ಉಪಸ್ಥಿತರಿದ್ದರು.
 ನಿಡ್ಪಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂಧ್ಯಾಲಕ್ಷ್ಮೀ ಸ್ವಾಗತಿಸಿದರು. ಶಿಬಿರದ ನಿರ್ದೇಶಕ ಮುರಲೀಧರ ಸಿ.ಹೆಚ್ ವಂದಿಸಿ ಕಾರ್ಯಕ್ರಮ ನಿರೂಪಿಸಿದರು. ಪ್ರಸಾದ್ ನೇತ್ರಾಲಯದ ವೈದ್ಯರುಗಳು, ಪಾಣಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಸಹಕರಿಸಿದರು.
  ಗ್ರಾಮ ಪಂಚಾಯತ್ ನಿಡ್ಪಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಪಾಣಾಜೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು- ಉಡುಪಿ- ಸುಳ್ಯ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್  ಪುತ್ತೂರು ಬೆಟ್ಟಂಪಾಡಿ ವಲಯ, ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ವಿಜಯನಗರ ಶಾಖೆ, ಶಾಂತದುರ್ಗಾ ಸಂಜೀವಿನಿ ಒಕ್ಕೂಟ, ನಿಡ್ಪಳ್ಳಿ, ಮಂಗಳಾ ಕಲಾ ಸಾಹಿತ್ಯ ವೇದಿಕೆ  ಪಟ್ಟೆ ಬಡಗನ್ನೂರು ಘಟಕ, ನಿಡ್ಪಳ್ಳಿ ಹಾಲು ಉತ್ಪಾದಕರ ಸಹಕಾರಿ ಸಂಘ ನಿಡ್ಪಳ್ಳಿ, ತಂಬುತ್ತಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ತಂಬುತ್ತಡ್ಕ , ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ನಿಡ್ಪಳ್ಳಿ ಘಟ ಸಮಿತಿ ಕೌಡಿಚ್ಚಾರು ವಲಯ ಮತ್ತು ಯಶಸ್ವಿ ನಾಗರಿಕ ಸೇವಾ ಸಂಘ, ವಾಸುದೇವ ನಗರ, ಕಾರ್ಕಳ  ಉಡುಪಿ ಇವುಗಳ ಜಂಟಿ ಆಶ್ರಯದಲ್ಲಿ  ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರ ಆಯೋಜಿಸಿದ್ದರು.      

LEAVE A REPLY

Please enter your comment!
Please enter your name here