ಕುಂಜೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಬಿಡುಗಡೆ

0

ಪುತ್ತೂರು: ಆರ್ಯಾಪು ಗ್ರಾಮದ ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಸೆ.26ರಿಂದ ಅ. 4ರವರೆಗೆ ನಡೆಯಲಿರುವ ನವರಾತ್ರಿ ಉತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯು ಸೆ.16ರಂದು ಬಿಡುಗಡೆಗೊಂಡಿತು.


ಮಧ್ಯಾಹ್ನ ದೇವಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ ಬಳಿಕ ಬಿಡುಗಡೆಗೊಳಿಸಲಾಯಿತು. ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ, ಸದಸ್ಯರುಗಳು, ಶ್ರೀಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃಧ್ಧಿ ಯೋಜನೆಯ ಸದಸ್ಯರುಗಳು, ವಿಶ್ವ ಯುವಕ ವೃಂದದ ಸದಸ್ಯರುಗಳು, ಶಾಶ್ವತ ಸೇವಾಕರ್ತರು ಸೇರಿದಂತೆ ನೂರಾರು ಭಗವದ್ಭಕ್ತರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here