ಮಾಡನ್ನೂರು ಹಿ.ಪ್ರಾ.ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

0

ಪುತ್ತೂರು : ಮಾಡನ್ನೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಮೇನಾಲ ಕ್ಲಸ್ಟರ್ ಸಿಆರ್‌ಪಿ ಜಯಂತಿ ಪ್ರಾಸ್ತಾವಿಕ ಮಾತನಾಡಿದರು. ಅರಿಯಡ್ಕ ಗ್ರಾ.ಪಂ.ಅದ್ಯಕ್ಷೆ ಸೌಮ್ಯ ಭಾಲಸುಬ್ರಹ್ಮಣ್ಯ ಅಧ್ಯಕ್ಷತೆ ವಹಿಸಿದ್ದರು. ಅರಿಯಡ್ಕ ಗ್ರಾ.ಪಂ. ಸದಸ್ಯರಾದ ಮೋನಪ್ಪ ಪೂಜಾರಿ ಕೆರೆಮಾರು, ಲಯನ್ಸ್ ಕ್ಲಬ್ ಕಾವು ಘಟಕದ ಅದ್ಯಕ್ಷ ಪವನ್‌ರಾಮ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ನಾಗೇಶ್ ಪಾಟಾಳಿ, ನಸ್ರುತುಲ್ ಜುಮಾಅತ್ ಕಮಿಟಿ ಮಾಜಿ ಅಧ್ಯಕ್ಷ ಇಬ್ರಾಹಿಂ ಶುಭಹಾರೈಸಿದರು.

ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯರಾದ ಜಯಂತಿ, ಶಂಕರ್, ವಿಜಿತ್, ಎಸ್‌ಡಿಎಂಸಿ ಅಧ್ಯಕ್ಷ ಜುಬೇರ್, ಉಪಾಧ್ಯಕ್ಷ ಸವಿತಾ ಎನ್., ಪ್ರಭಾರ ಮುಖ್ಯಗುರು ರಾಜೇಶ್ ಉಪಸ್ಥಿತರಿದ್ದರು. ಸಹಶಿಕ್ಷಕ ಸಂತೋಷ್ ಎವ್ಜಿನ್ ಮಿಸ್ಕಿತ್ ಸ್ವಾಗತಿಸಿ ಅತಿಥಿ ಶಿಕ್ಷಕಿ ಕವಿತಾ ವಂದಿಸಿದರು.ಸಹಶಿಕ್ಷಕಿ ಸುಪ್ರಿಯಾ ಎಸ್. ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಕಾರ್ಯಕರ್ತೆ ಉಷಾಪೂರ್ಣ, ಪೋಷಕರು, ಎಸ್‌ಡಿಎಂಸಿ ಸದಸ್ಯರು, ಅಡುಗೆ ಸಿಬಂದಿಗಳು ಸಹಕರಿಸಿದರು. ಮೇನಾಲ ಕ್ಲಸ್ಟರ್‌ನ ಮುಖ್ಯಶಿಕ್ಷಕರು, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here