ಪುತ್ತೂರು : ತಾಲೂಕಿನ ಆರ್ಯಾಪು ಗ್ರಾಮದ ಕಂಬಳತಡ್ಡ ಅಂಗನವಾಡಿ ಕೇಂದ್ರ ಇದರ ವತಿಯಿಂದ ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ಚೈತ್ರಿಕರವರ ಅಧ್ಯಕ್ಷತೆಯಲ್ಲಿ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮವು ಸೆ.17 ರಂದು ಬೂಡಿಯಾರು ಹೊಸಮನೆ ಶ್ರೀ ಚಕ್ರ ರಾಜರಾಜೇಶ್ವರಿ ದೇವಸ್ಥಾನದ ಆವರಣದಲ್ಲಿ ನಡೆಯಿತು.
ಆರ್ಯಾಪು ಗ್ರಾಮ ಪಂಚಾಯಿತಿ ಸದಸ್ಯೆ ರತ್ನಾವತಿ ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಅಂಗನವಾಡಿ ಮೇಲ್ವಿಚಾರಕರಾದ ಜಲಜಾಕ್ಷಿ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ಸಮುದಾಯ ಆರೋಗ್ಯ ಅಧಿಕಾರಿ ಕುಮಾರಿ ಕ್ಷಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಶ್ರೀ ಕೃಷ್ಣ ಯುವಕ ಮಂಡಲದ ಅಧ್ಯಕ್ಷ ಸಂತೋಷ್ ಸುವರ್ಣ ಮೇರ್ಲ ಹಾಗೂ ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಚೈತ್ರಿಕಾ ಪೌಷ್ಟಿಕ ಆಹಾರದ ಬಗ್ಗೆ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಶ್ರೀ ಚಕ್ರ ರಾಜರಾಜೇಶ್ವರಿ ಮಹಿಳಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ನಳಿನಿ ಹಾಗೂ ಆಶಾ ಕಾರ್ಯಕರ್ತೆ ಶ್ರೀಮತಿ ಗೀತಾ ಉಪಸ್ಥಿತರಿದ್ದರು. ಮಕ್ಕಳ ಪೋಷಕರು ,ಸ್ತ್ರೀ ಶಕ್ತಿ ಸಂಘಗಳ ಸದಸ್ಯರು, ಮಹಿಳಾ ಮಂಡಳಿಯ ಸದಸ್ಯರು ವಿವಿಧ ಪೌಷ್ಟಿಕ ಆಹಾರಗಳನ್ನು ತಯಾರಯ ಮಾಡಿದರು. ಮಕ್ಕಳು ,ಆಶಾಕಾರ್ಯಕರ್ತೆಯರು ಉಪಸ್ಥಿತರಿದ್ದು ಪೌಷ್ಟಿಕ ಆಹಾರದ ಜೊತೆಗೆ ಮಕ್ಕಳ ಪೋಷಕರು ತಯಾರಿಸಿದ ಹೂಗುಚ್ಛಗಳು ಗಮನ ಸೆಳೆದವು.
ಪೌಷ್ಟಿಕ ಆಹಾರ ತಯಾರಿಸಿದ ಎಲ್ಲರಿಗೂ ಪ್ರೋತ್ಸಾಹಕ ಬಹುಮಾನವನ್ನು ಸ್ತ್ರೀ ಶಕ್ತಿ ಸಂಘಗಳ ವತಿಯಿಂದ ನೀಡಲಾಯಿತು. ಸ್ತ್ರೀ ಶಕ್ತಿ ಸಂಘದ ಸದಸ್ಯೆ ಚಂದ್ರಾವತಿ ಅಡ್ಕ ಪ್ರಾರ್ಥಿಸಿ , ಚಂದ್ರಾವತಿ ಮೇರ್ಲ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಶ್ಯಾಮಲ ಕಾರ್ಯಕ್ರಮ ನಿರೂಪಿಸಿ ವಂದಿಸಿದರು ಹಾಗೂ ಅಂಗನವಾಡಿ ಸಹಾಯಕಿ ಪುಷ್ಪಾವತಿ ಸಹಕರಿಸಿದರು.