ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಕ್ಷೇತ್ರದ ಪದಾಧಿಕಾರಿಗಳಿಂದ ಒಡಿಯೂರು, ಮಾಣಿಲ, ಕೊಂಡೆಯೂರು ಶ್ರೀಗಳ ಭೇಟಿ

0

ವಿಟ್ಲ: ಇಡ್ಕಿದು ಗ್ರಾಮದ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಾಲಯದಲ್ಲಿ ೨೦೨೩ರ ಜನವರಿ ತಿಂಗಳಲ್ಲಿ ನಡೆಯಲಿರುವ ಬ್ರಹ್ಮಕಲಶದ ಅಂಗವಾಗಿ ಕ್ಷೇತ್ರದ ವತಿಯಿಂದ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ, ಶ್ರೀಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಉಪ್ಪಳ ಕೊಂಡೆಯೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿಯಾಗಿ ಕ್ಷೇತ್ರದ ಅಭಿವೃದ್ಧಿಯ ಕುರಿತಾಗಿ ಮಾಹಿತಿ ನೀಡಿ ಕಾರ್ಯಕ್ರಮಕ್ಕೆ ಅವರನ್ನು ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶ ಸಮಿತಿಯ ಅಧ್ಯಕ್ಷರಾದ ರಾಜಾರಾxಮ ಶೆಟ್ಟಿ ಕೋಲ್ಪೆಗುತ್ತು, ಕೋಲ್ಪೆ ಶ್ರೀ ಷಣ್ಮುಖ ಸುಬ್ರಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಸುರೇಶ್ ಕೆ.ಎಸ್. ಮುಕ್ಕುಡ,
ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಪುಲ್ಲ ಚಂದ್ರ ಪಿ.ಜಿ. ಕೋಲ್ಪೆ, ಸಮಿತಿ ಪದಾಧಿಕಾರಿ ಕೃಷ್ಣಪ್ಪ ಕೆಮನಾಜೆ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here