ರಾಷ್ಟ್ರೀಯ ಪತ್ರಕರ್ತರ ಮಂಡಳಿ ಸದಸ್ಯ ಪಿ.ಬಿ.ಹರೀಶ್ ರೈಯವರಿಗೆ ಸವಣೂರು ವಿದ್ಯಾರಶ್ಮಿ ವಿದ್ಯಾಲಯದಿಂದ ಸನ್ಮಾನ

0

ಪುತ್ತೂರು: ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿಯ ಸದಸ್ಯರಾಗಿ ಆಯ್ಕೆಗೊಂಡಿರುವ ಹಿರಿಯ ಪತ್ರಕರ್ತ ಹಾಗೂ ಸಹಕಾರಿ ರತ್ನ ಸವಣೂರು ಸೀತಾರಾಮ ರೈಯವರ ಅಭಿನಂದನಾ ಗ್ರಂಥ “ಅಮೃತ ರಶ್ಮಿ” ಪ್ರಧಾನ ಸಂಪಾದಕ ಪಿ.ಬಿ.ಹರೀಶ್‌ಯವರನ್ನು ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದಲ್ಲಿ ಜರಗಿದ ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ದ.ಕ ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಸಚಿವ ಎಸ್.ಅಂಗಾರ, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ, ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ಸವಣೂರು ಗ್ರಾ.ಪಂ, ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ, ವಿದ್ಯಾರಶ್ಮಿ ಸಂಸ್ಥೆಯ ಟ್ರಸ್ಟಿಗಳಾದ ಸವಣೂರು ಎನ್.ಸುಂದರ ರೈ, ರಶ್ಮಿ ಅಶ್ವಿನ್ ಶೆಟ್ಟಿ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ನಾರಾಯಣ ಮೂರ್ತಿರವರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here