ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರ್ಯಕರ್ತರು ಶಕ್ತಿಮೀರಿ ಶ್ರಮಿಸಬೇಕೆಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ ಹೇಳಿದರು ಅವರು ಬಲ್ನಾಡು ಗ್ರಾಮದ ಉಜ್ರುಪಾದೆಯಲ್ಲಿ ನಗರ ಕಾಂಗ್ರೆಸ್ ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಶಕುಂತಲಾ ಟಿ. ಶೆಟ್ಟಿ ಶಾಸಕರಾಗಿದ್ದಾಗ ಸಾಕಷ್ಟು ಕ್ಷೇತ್ರದ ಅಭಿವೃದ್ಧಿಗೆ ಶ್ರಮವಹಿಸಲಾಗಿತ್ತು. ಆದರೆ ಈಗಿನ ಬಿಜೆಪಿ ಶಾಸಕರಿಂದ ಕೆಲವೇ ಕೆಲವು ಜನರ ಅಭಿವೃದ್ಧಿಯಾಗುತ್ತಿದೆ.
ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರಕಾರದ ದುರಾಡಳಿತದ ಬಗ್ಗೆ ಜನರಿಗೆ ತಿಳಿಸಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರ್ಯಕರ್ತರೆಲ್ಲ ಶ್ರಮವಹಿಸಲು ಸನ್ನದ್ದರಾಗಬೇಕೆಂದು ಕರೆ ನೀಡಿದರು. ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಅಲಿ ಮಾತನಾಡಿ ಕಾರ್ಯಕರ್ತರು ಪಕ್ಷದಲ್ಲಿ ಪಿಲ್ಲರ್ ಇದ್ದಂತೆ, ಪಿಲ್ಲರ್ ವೀಕ್ ಆದರೆ ಕಟ್ಟಡವೇ ಕುಸಿದು ಬೀಳುತ್ತದೆ. ಅದಕ್ಕಾಗಿ ಪಿಲ್ಲರ್‌ಗಳನ್ನು ಗಟ್ಟಿಗೊಳಿಸುವ ಕೆಲಸದಲ್ಲಿ ನಾವು ತೊಡಗಿದ್ದೇವೆ. ಈ ಹಿಂದೆ ನೆಹರೂ ಇಂದಿರಾಗಾಂಧಿ ಕಾಲದಲ್ಲಿ ಕಾಂಗ್ರೆಸ್‌ನಲ್ಲಿ ಒಂದು ಕಂಬವನ್ನು ನಿಲ್ಲಿಸಿದರೂ ಗೆಲ್ಲುವ ಕಾಲ ಒಂದು ಇತ್ತು ಆದರೆ ಈಗ ಕಾಲ ಬದಲಾಗಿದೆ ಪಕ್ಷದ ಸೈನಿಕರಾದ ಕಾರ್ಯಕರ್ತರ ಶ್ರಮವಿಲ್ಲದೆ ಪಕ್ಷದಲ್ಲಿ ಯಾರೂ ಗೆಲ್ಲಲು ಸಾಧ್ಯವಿಲ್ಲ, ಬೂತ್ ಮಟ್ಟದಲ್ಲಿ ಪಕ್ಷ ನಿಷ್ಠೆ ಇರುವ ಪ್ರಾಮಾಣಿಕ ಕಾರ್ಯಕರ್ತರ ತಂಡವನ್ನು ರಚನೆ ಮಾಡಲು ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ನಗರ ಸಭೆಯಲ್ಲಿ ಕಾಂಗ್ರೆಸ್ ಆಡಳಿತ ಇದ್ದಾಗ ಬಲ್ನಾಡು ಬಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ನಡೆದಿದೆ. ಜಯಂತಿ ಬಲ್ನಾಡ್ ಈ ವಾರ್ಡ್‌ನ ಸರ್ವ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿರುತ್ತಾರೆ. ಆದರೆ ಈಗಿನ ಬಿಜೆಪಿ ಆಡಳಿತದಿಂದ ಅಭಿವೃದ್ಧಿ ಶೂನ್ಯವಾಗಿದೆ ಎಂದು ಹೇಳಿದರು. ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಮಾಜಿ ಅಧ್ಯಕ್ಷ ಪ್ರವೀಣ್‌ಚಂದ್ರ ಆಳ್ವ ಮಾತನಾಡಿ ಇನ್ನು ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ ಮುಂದಿನ ದಿನಗಳಲ್ಲಿ ಕಾರ್ಯಕರ್ತರು ಬಹಳಷ್ಟು ಜವಾಬ್ದಾರಿ ವಹಿಸಿ ಕೆಲಸ ಮಾಡಬೇಕಾಗಿದೆ ಎಂದರು.
ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜರಾಮ್ ಕೆ.ಬಿ.ಯವರು ಮಾತನಾಡಿ ಬಿಜೆಪಿಗರು ಮನಸುಗಳನ್ನು ಒಡೆಯುವ ಕೆಲಸ ಮಾಡುತ್ತಿದೆ ಆದರೆ ಕಾಂಗ್ರೆಸ್ ಕಾರ್ಯಕರ್ತರು ಚದುರಿಹೋದ ಮನಸ್ಸುಗಳನ್ನು ಒಂದು ಗೂಡಿಸುವ ಕೆಲಸ ಮಾಡಬೇಕು ಅದು ಕಾಂಗ್ರೆಸ್ ಪಕ್ಷದ ಸಿದ್ಧಾಂತ ಕೂಡ ಹೌದು. ಪುತ್ತೂರಲ್ಲಿ ಪಕ್ಷ ಸಂಘಟನೆಯ ಕೆಲಸ ಜೋರಾಗಿ ನಡೆಯುತ್ತಿದೆ, ಕಾರ್ಯಕರ್ತರು ಚುನಾವಣೆಯ ವರೆಗೂ ವಿರಮಿಸದೆ ಕೆಲಸ ಮಾಡಬೇಕು ಎಂದು ಹೇಳಿದರು. ಪುತ್ತೂರು ಬ್ಲಾಕ್ ಉಪಾಧ್ಯಕ್ಷ ಮೌರಿಸ್ ಮಸ್ಕರೇನಸ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ನಗರಸಭಾ ಸದಸ್ಯ ರಿಯಾಜ್ ಪರ್ಲಡ್ಕ, ನಗರ ಸಭೆಯ ಮಾಜಿ ಅಧ್ಯಕ್ಷೆ ಜಯಂತಿ ಬಲ್ನಾಡ್, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ನ ಉಪಾಧ್ಯಕ್ಷ ನಾರಾಯಣ ಗೌಡ ಕುಕ್ಕುತ್ತಡಿ, ಪುತ್ತೂರು ಬ್ಲಾಕ್ ಪ್ರದಾನ ಕಾರ್ಯದರ್ಶಿ ಪೂರ್ಣೇಶ್ ಭಂಡಾರಿ, ನಗರ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಗಳಾದ ದಾಮೋದರ್ ಭಂಡಾರ್ಕರ್, ರಶೀದ್ ಮುರ, ವಿಕ್ಟರ್ ಪಾಯ್ಸ ಮಂಜಲ್ಪಡ್ಪು ಪುತ್ತೂರು ಬ್ಲಾಕ್ ಎಸ್‌ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ್ ಎಸ್‌ಸಿ ಘಟಕದ ಅಧ್ಯಕ್ಷ ಕೇಶವ ಪಡೀಲ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್, ಕಾರ್ಮಿಕ ಘಟಕದ ಅಧ್ಯಕ್ಷ ಶರೊನ್ ಸಿಕ್ವೆರಾ, ಅರ್ಯಾಪು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಜ್ವಲ್ ರೈ ತೊಟ್ಲ, ಬಲ್ನಾಡ್ ಪಂಚಾಯತ್ ಮಾಜಿ ಅಧ್ಯಕ್ಷ ನವೀನ್ ಕರ್ಕೇರ, ಉಳಾಲ್ತಿ ದೈವಸ್ಥಾನದ ಮಾಜಿ ಮೊಕ್ತೇಸರ ತಿಮಪ್ಪಗೌಡ ಬಲ್ನಾಡ್, ಹಿರಿಯ ಕಾಂಗ್ರೆಸ್ ಮುಖಂಡರಾದ ರವಿ ಕುಂಜತ್ತಾಯ, ಅಬ್ದುಲ್ ರಹಿಮಾನ್ ಪಳ್ಳಿಕೆರೆ, ಹಮೀದ್ ಹಾಜಿ ಬಲ್ನಾಡ್, ಜಿಲ್ಲಾ ಕಾಂಗ್ರೆಸ್ ಸದಸ್ಯೆ ಸುಧಾ ಕುಂಜತ್ತಾಯ, ಬ್ಲಾಕ್ ಅಸಂಘಟಿತ ಕಾರ್ಮಿಕ ಘಟಕದ ಕಾರ್ಯದರ್ಶಿ ಇಸ್ಮಾಯಿಲ್ ಎಂ.ಬಿ, ರೋಹಿತ್ ಬಲ್ನಾಡ್, ಮಜೀದ್ ಯು.ಪಿ, ಝುಬೈರ್ ಬಲ್ನಾಡ್, ಜಾನ್‌ಡಿ. ಸೋಜಾ, ಜಾಬೀರ್ ಬಲ್ನಾಡ್, ಲತೀಫ್ ಬಲ್ನಾಡ್, ಮಹಮ್ಮದ್ ಮೊದಲಾದವರು ಉಪಸ್ಥಿತರಿದ್ದರು.
ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಜಿಲ್ಲಾ ಪ್ರದಾನ ಕಾರ್ಯದರ್ಶಿ ಶೆರೀಫ್ ಬಲ್ನಾಡ್ ಸ್ವಾಗತಿಸಿ ಬಲ್ನಾಡ್ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಗೌಡ ಒಳಗುಡ್ಡೆ ವಂದಿಸಿದರು.