ಪುತ್ತೂರು ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಪುತ್ತೂರು: ಪುತ್ತೂರು ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯು ಸೆ.19ರಂದು ಅಂಬಿಕಾ ಕೇಂದ್ರೀಯ ವಿದ್ಯಾಲಯದಲ್ಲಿ ಹಿರಿಯ ಸಾಹಿತಿ ಬಿ ಪುರಂದರ ಭಟ್ ಅವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷ ಡಾ| ಶ್ರೀಧರ್ ಹೆಚ್.ಜಿ, ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷ ಡಾ| ಎಂಪಿ ಶ್ರೀನಾಥ್, ಜಿಲ್ಲಾ ಕೋಶಾಧ್ಯಕ್ಷ ಬಿ ಐತಪ್ಪ ನಾಯ್ಕ್, ಅಂಬಿಕಾ ವಿದ್ಯಾಸಂಸ್ಥೆಗಳ ಮುಖ್ಯಸ್ಥ ಸುಬ್ರಹ್ಮಣ್ಯ ನಟ್ಟೋಜ, ರಾಜಶ್ರೀ ನಟ್ಟೋಜ, ಹಿರಿಯ ಸಾಹಿತಿ ಪ್ರೊ. ವಿ. ಬಿ ಅರ್ತಿಕಜೆ, ಪ್ರೊ.ಎ ವಿ ನಾರಾಯಣ, ಅಂಬಿಕ ವಿದ್ಯಾಲಯದ ಪ್ರಾಂಶುಪಾಲ ರಾಕೇಶ್ ಕುಮಾರ್ ಕಮ್ಮಾಜೆ, ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಕೋಶಾಧ್ಯಕ್ಷ ಡಾ| ಹರ್ಷಕುಮಾರ್ ರೈ ಮಾಡಾವು ಮತ್ತು ಅಂಬಿಕಾ ವಿದ್ಯಾಲಯದ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here