ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾಗಿ ಡಾ|ಎಂ.ಎನ್.ರಾಜೇಂದ್ರ ಕುಮಾರ್

0

ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾಗಿ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಅವರು ಎರಡನೇ ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಸೆ.19ರಂದು ನಡೆದ ಸಹಕಾರ ಮಾರಾಟ ಮಹಾಮಂಡಳದ ಆಡಳಿತ ಮಂಡಳಿಯ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಮಂಗಳೂರು ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರಿ ಸಂಘದ ಪ್ರತಿನಿಽಯಾಗಿ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕ ಚುನಾವಣೆಗೆ ಸ್ಪಽಸಿದ್ದ ಡಾ| ಎಂ.ಎನ್.ರಾಜೇಂದ್ರಕುಮಾರ್ ಅವಿರೋಧವಾಗಿ ಆಯ್ಕೆಗೊಂಡು, ಎರಡನೇ ಬಾರಿಗೆ ಅಧ್ಯಕ್ಷರಾಗಿಯೂ ಪುನರಾಯ್ಕೆಗೊಂಡರು.

ಸಹಕಾರ ಮಾರಾಟ ಮಹಾ ಮಂಡಳದ ಇತಿಹಾಸದಲ್ಲಿ 4945ರ ನಂತರ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮೊದಲ ಅಧ್ಯಕ್ಷರಾಗಿ 2017ರಲ್ಲಿ ಆಯ್ಕೆಗೊಂಡಿದ್ದ ರಾಜೇಂದ್ರ ಕುಮಾರ್, ಎರಡನೇ ಬಾರಿ ಆಯ್ಕೆಯಾಗಿ ಇತಿಹಾಸ ನಿರ್ಮಿಸಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಓರ್ವ ನಿರ್ದೇಶಕರಾಗಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಅವರು ಆಯ್ಕೆಯಾಗಿದ್ದಾರೆ.

ಕಳೆದ 28 ವರ್ಷಗಳಿಂದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಬ್ಯಾಂಕಿನ ಸರ್ವಾಂಗೀಣ ಪ್ರಗತಿಗೆ ಕಾರಣಕರ್ತರಾಗಿರುವ ಡಾ|ರಾಜೇಂದ್ರ ಕುಮಾರ್ ಅವರು ಸಹಕಾರಿ ಬ್ಯಾಂಕಿಂಗ್ ಹಾಗೂ ಸಾಮಾಜಿಕ ರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ.ಇವರ ಅವಧಿಯಲ್ಲಿ ಬ್ಯಾಂಕ್ ರಾಷ್ಟ್ರೀಯ, ಅಂತರ್ರಾಷ್ಟ್ರೀಯ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದೆ.ಜೊತೆಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮೂಲಕ ನವೋದಯ ಗುಂಪುಗಳನ್ನು ಸ್ಥಾಪಿಸಿ ಗ್ರಾಮೀಣ ಜನತೆಯ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿರುವ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಅವರು ಸಹಕಾರಿ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪ್ರತಿಮ ಸೇವೆಗಾಗಿ ‘ಸಹಕಾರ ರತ್ನ’ರಾಜ್ಯ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಡಾ|ಎಂ.ಎನ್.ಆರ್‌ಗೆ ಅಭಿನಂದನೆ: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾಗಿ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿರುವ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ವತಿಯಿಂದ ಅಭಿನಂದಿಸಲಾಯಿತು.ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ ಹಾಗೂ ಎಸ್.ಬಿ.ಜಯರಾಮ ರೈ ಬಳಜ್ಜ, ಶಶಿಕುಮಾರ್ ರೈ ಬಾಲ್ಯೊಟ್ಟು ಸಹಿತ ನಿರ್ದೇಶಕರು, ಅಽಕಾರಿ ವರ್ಗದವರು ಉಪಸ್ಥಿತರಿದ್ದರು.

ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಹುದ್ದೆ ದೊರೆಯಲು ಕಾರಣರಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಸಚಿವರಾದ ಮುರುಗೇಶ್ ನಿರಾಣಿ, ಕೋಟ ಶ್ರೀನಿವಾಸ ಪೂಜಾರಿ, ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ರಾಜೇಂದ್ರ ಕುಮಾರ್ ಧನ್ಯವಾದ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here