ಕೆಮ್ಮಾರ ಶಾಲೆಯಲ್ಲಿ ಆಯುಷ್ಮಾನ್ ಕಾರ್ಡ್ ಶಿಬಿರ

0

ಕೆಮ್ಮಾರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೆಮ್ಮಾರ ಒಕ್ಕೂಟದ ವತಿಯಿಂದ ಕೆಮ್ಮಾರ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ಶಿಬಿರ ನಡೆಯಿತು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಝೀಝ್ ಬಿ.ಕೆ.ಶಿಬಿರಕ್ಕೆ ಚಾಲನೆ ನೀಡಿದರು. ಸುಮಾರು 110 ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಂಡರು. ಗ್ರಾಮಾಭಿವೃದ್ಧಿ ಯೋಜನೆಯ ಕೆಮ್ಮಾರ ಒಕ್ಕೂಟದ ಅಧ್ಯಕ್ಷ ರವಿಕಾಂತ್ ಬಡ್ಡಮೆ, ಒಕ್ಕೂಟದ ಸದಸ್ಯರಾದ ವಾಮನ ಬರಮೇಲು, ತೇಜ, ಶಾಲಾ ಅಧ್ಯಾಪಕ ವೃಂದ, ವಿದ್ಯಾರ್ಥಿ ಪೋಷಕರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಸಹಕರಿಸಿದರು.

LEAVE A REPLY

Please enter your comment!
Please enter your name here