ನಿವೃತ್ತ ಪ್ರಾಂಶುಪಾಲ ಸತೀಶ್ ಭಟ್‌ರವರಿಗೆ ಸನ್ಮಾನ

0

ರಾಮಕುಂಜ: ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ವತಿಯಿಂದ ಉಜಿರೆಯ ಶ್ರೀ ಸಿದ್ದವನ ಗುರುಕುಲದಲ್ಲಿ ಸೆ.15ರಂದು ನಡೆದ ನಿವೃತ್ತ ಪ್ರಾಂಶುಪಾಲರುಗಳ ಸನ್ಮಾನ ಕಾರ್ಯಕ್ರಮದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಂ.ಸತೀಶ ಭಟ್‌ರವರನ್ನು ಸನ್ಮಾನಿಸಲಾಯಿತು.


ರಾಜ್ಯಸಭೆ ಸದಸ್ಯರೂ ಆಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಡಾ.ಮೋಹನ ಆಳ್ವ, ಪಿಯುಸಿ ಉಪನಿರ್ದೇಶಕರಾದ ಸಿ.ಡಿ.ಜಯಣ್ಣ ಸಹಿತ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here