ನೆಲ್ಯಾಡಿ: ಧರ್ಮಶ್ರೀ ಮತ್ತು ಶಿವಾನಿ ಜ್ಞಾನ ವಿಕಾಸ ಕೇಂದ್ರ ನೆಲ್ಯಾಡಿ ಇದರ ವತಿಯಿಂದ ನೆಲ್ಯಾಡಿ ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ಬೀದಿನಾಟಕ ಕಾರ್ಯಕ್ರಮ ನಡೆಯಿತು.
ಮೊಬೈಲ್ ಬಳಕೆಯಿಂದ ಮಕ್ಕಳಲ್ಲಿ ಆಗುವ ದುಷ್ಪರಿಣಾಮ, ಸಂಚಾರಿ ನಿಯಮ, ತ್ಯಾಜ್ಯ ವಸ್ತುಗಳ ವಿಲೇವಾರಿ, ಹಸಿ ಕಸ ಮತ್ತು ಒಣ ಕಸ ವಿಂಗಡನೆ, ಪ್ಲಾಸ್ಟಿಕ್ ಎಲ್ಲೆಂದರಲ್ಲಿ ಎಸೆಯುವುದರಿಂದ ಪ್ರಾಣಿಗಳ ಹಾಗೂ ಮನುಷ್ಯನ ದೇಹದಲ್ಲಿ ಆಗುವ ಪರಿಣಾಮಗಳ ಕುರಿತು ಸಂಸಾರ ಕಲಾ ತಂಡದ ಸದಸ್ಯರು ಬೀದಿನಾಟಕದ ಮೂಲಕ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಹಾಗೂ ಶಾಲೆಯ ಮಕ್ಕಳಿಗೆ ಅರಿವು ಮೂಡಿಸಿದರು.
ಶಾಲಾ ಮುಖ್ಯೋಪಾಧ್ಯಾಯ ಆನಂದ ಅಜಿಲ ಕಾರ್ಯಕ್ರಮ ಉದ್ಘಾಟಿಸಿದರು. ಕೌಕ್ರಾಡಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ ಅಧ್ಯಕ್ಷತೆ ವಹಿಸಿದ್ದರು. ನೆಲ್ಯಾಡಿ ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವಿಮಲ್ ಕುಮಾರ್, ಜ್ಞಾನವಿಕಾಸ ಕೇಂದ್ರದ ಸಮನ್ವಯ ಅಧಿಕಾರಿ ಚೇತನ ಉಪಸ್ಥಿತರಿದ್ದರು. ಸೇವಾಪ್ರತಿನಿಧಿ ಹೇಮಾವತಿ ಕಾರ್ಯಕ್ರಮ ನಿರೂಪಿಸಿದರು. ಸವಿತಾ ಸ್ವಾಗತಿಸಿ, ಹೇಮಲತಾ ವಂದಿಸಿದರು. ಸೇವಾಪ್ರತಿನಿಧಿಗಳಾದ ಸುಮನಾ ಎಸ್., ನಮಿತಾ ಶೆಟ್ಟಿ ಸಹಕರಿಸಿದರು.