ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಲದ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಗೆ ಹಿರಿಯ ಸಹಕಾರಿ ನಿಯೋಗದಿಂದ ಅಭಿನಂದನೆ 

0

ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಲದ ಅಧ್ಯಕ್ಷರಾಗಿ 2 ನೇ ಬಾರಿ ಅವಿರೋಧವಾಗಿ ಆಯ್ಕೆಗೊಂಡ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಪುತ್ತೂರಿನ ಹಿರಿಯ ಸಹಕಾರಿಗಳ ನಿಯೋಗ ಬೆಂಗಳೂರಿನಲ್ಲಿ ಭೇಟಿ ಮಾಡಿ ಅವರನ್ನು ಅಭಿನಂದಿಸಿದರು.

ಕೆ.ಎಂ.ಎಫ್ ಉಪಾಧ್ಯಕ್ಷ ಎಸ್.ಬಿ ಜಯರಾಮ ರೈ ಬಳಜ್ಹ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಳ್ಯೊಟ್ಟು, ಕರ್ನಾಟಕ ರಾಜ್ಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಮತ್ತು ಪುತ್ತೂರು ಪಿ ಎಲ್ ಡಿ ಬ್ಯಾಂಕ್  ನಿರ್ದೇಶಕ ರಾಜಶೇಖರ್ ಜೈನ್ ಅವರು ರಾಜ್ಯ ಸಹಕಾರ‌ ಮಹಾಮಂಡಲದ ಅಧ್ಯಕ್ಷ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಮತ್ತು ನಿರ್ದೇಶಕ ದೇವಿಪ್ರಸಾದ್ ಅವರನ್ನು ಅಭಿನಂದಿಸಿದರು.

LEAVE A REPLY

Please enter your comment!
Please enter your name here