ಪಾಣಾಜೆ ಸುಬೋಧ ಪ್ರೌಢಶಾಲೆಯಲ್ಲಿ   ಪುತ್ತೂರು ವಲಯ ಮಟ್ಟದ ಪ್ರತಿಭಾ ಕಾರಂಜಿ 

0

ನಿಡ್ಪಳ್ಳಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಪುತ್ತೂರು, ಪುತ್ತೂರು ಕ್ಷೇತ್ರ ಸಂಪನ್ಮೂಲ ಕೇಂದ್ರ, ಸುಬೋಧ  ಪ್ರೌಢಶಾಲೆ ಪಾಣಾಜೆ ಇದರ ಜಂಟಿ ಆಶ್ರಯದಲ್ಲಿ ಪುತ್ತೂರು ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸೆ.19 ರಂದು ಸುಬೋಧ ಪ್ರೌಢಶಾಲೆಯಲ್ಲಿ ಹಾಗೂ ಪಾಣಾಜೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಜರಗಿತು.


ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಭಾರತಿ ಭಟ್ ಉದ್ಘಾಟಿಸಿ ಮಾತನಾಡಿ ಮಕ್ಕಳು ಸೋಲು ಗೆಲುವುಗಳನ್ನು ಸಮಾನ ರೀತಿಯಲ್ಲಿ ಸ್ವೀಕರಿಸಬೇಕು. ಮಕ್ಕಳ ಪ್ರತಿಭೆಯ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ ಎಂದು ಶುಭ ಹಾರೈಸಿದರು. ಪಾಣಾಜೆ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಉಪೇಂದ್ರ ಬಲ್ಯಾಯ  ಅಧ್ಯಕ್ಷತೆ ವಹಿಸಿ ಮಾತನಾಡಿ ಬೇರೆ ಬೇರೆ ವಿದ್ಯಾರ್ಥಿಗಳಲ್ಲಿ ಬೇರೆ ಬೇರೆ ಪ್ರತಿಭೆಗಳು ಅಡಕವಾಗಿದೆ ವಿದ್ಯಾರ್ಥಿಗಳಿಗೆ ಅವಕಾಶ ನೀಡಿದಾಗ ಪ್ರತಿಭೆಗಳು ಹೊರ ಹೊರ ಹೊಮ್ಮಲು ಪ್ರತಿಭಾ ಕಾರಂಜಿ ಅವಶ್ಯಕ ಎಂದು ಹೇಳಿದರು.

ಪುತ್ತೂರು ತಾಲೂಕಿನ 30 ಪ್ರೌಢಶಾಲೆಗಳ ವಿದ್ಯಾರ್ಥಿಗಳು, 21 ಸ್ಪರ್ಧೆಗಳು ನಡೆಯಿತು. ಸುಮಾರು 500 ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಶಿಕ್ಷಣ ಇಲಾಖೆಯ ಹರಿಪ್ರಸಾದ್, ಪ್ರತಿಭಾ ಕಾರಂಜಿಯ ನೋಡಲ್ ಅಧಿಕಾರಿ ರತ್ನಕುಮಾರಿ, ಸಿಆರ್ ಪಿ ಪರಮೇಶ್ವರಿ ಪ್ರಸಾದ್, ಜಿಲ್ಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಶ್ಯಾಮಲಾ , ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ನಾಗೇಶ್ ಪಾಟಾಳಿ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಸೀತಾರಾಮ್ ಗೌಡ,ಪಾಣಾಜೆ ವಿದ್ಯಾವರ್ಧಕ ಸಂಘದ ಸಂಚಾಲಕ ಜಿ ಮಹಾಬಲೇಶ್ವರ ಭಟ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವೀಂದ್ರ ಭಂಡಾರಿ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಜಯಶ್ರೀ ದೇವಸ್ಯ, ಮುಖ್ಯ ಶಿಕ್ಷಕ ಶ್ರೀಪತಿ ಇಂದಾಜೆ, ಸುಧೀರ್ ರೈ  ಮತ್ತಿ ತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here